Monday, June 8, 2026
spot_imgspot_img
spot_imgspot_img

ರಾಷ್ಟ್ರಧ್ವಜಕ್ಕೆ ಅಪಮಾನ; ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

- Advertisement -
- Advertisement -

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಲ್ದೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರಧ್ವಜದ ಬಗ್ಗೆ ಅಪಮಾನ ಮಾಡಿದ ಆರೋಪದಡಿ ಜಿಲ್ಲಾ ಬಿಜೆಪಿಯಿಂದ ಸಿದ್ದರಾಮಯ್ಯ ವಿರುದ್ಧ ಚಿಕ್ಕಮಗಳೂರು ತಾಲೂಕು ಆಲ್ದೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸಿದ್ದರಾಮಯ್ಯನವರು ರಾಷ್ಟ್ರಧ್ವಜದ ಬಣ್ಣ ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೆಂಪು, ಬಿಳಿ, ಹಸಿರು ಎಂದಿದ್ದರು. ಕೇಸರಿ ಬದಲು ಕೆಂಪು ಎಂದು ಧ್ವಜಕ್ಕೆ ಅಪಮಾನ ಮಾಡಿದ ಆರೋಪದಡಿ ಬಿಜೆಪಿ ಮುಖಂಡ ಗಿರೀಶ್, ಬಜರಂಗದಳದ ಶಿವಕುಮಾರ್ ದೂರು ದಾಖಲಿಸಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಬೆನ್ನಲ್ಲೇ ಕಾಫಿನಾಡಲ್ಲಿ ಬಿಜೆಪಿಗರು ಆಕ್ರೋಶ ಹೊರ ಹಾಕಿದ್ದಾರೆ.

- Advertisement -

Related news

error: Content is protected !!