Saturday, May 4, 2024
spot_imgspot_img
spot_imgspot_img

ರಾಷ್ಟ್ರಧ್ವಜ ಕಟ್ಟಲು ಮಹಡಿ ಏರಿದ ಸುಳ್ಯದ ಯುವಕ ಜಾರಿ ಬಿದ್ದು ಮೃತ್ಯು

- Advertisement -G L Acharya panikkar
- Advertisement -

ಬೆಂಗಳೂರು: ಎರಡನೇ ಮಹಡಿಯ ಟೆರೇಸ್‌ನಲ್ಲಿ ರಾಷ್ಟ್ರಧ್ವಜ ಹಾರಿಸುವ ವೇಳೆ ಜಾರಿ ಬಿದ್ದು, ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟ ಘಟನೆ ನಗರದ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.

ಸುಳ್ಯದ ಆರ್ಚಕ ನಾರಾಯಣ ಭಟ್ ಎಂಬವರ ಪುತ್ರ ವಿಶ್ವಾಸ್ ಕುಮಾರ್ (33) ಮೃತಪಟ್ಟ ಟೆಕ್ಕಿ. ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ವಿಶ್ವಾಸ್, ಹೆಣ್ಣೂರು ಎಚ್‌ಬಿಆರ್ ಲೇಔಟ್ 5ನೇ ಬ್ಲಾಕ್‌ನಲ್ಲಿ ತಮ್ಮ ಕಟ್ಟಡದ ಟೆರೇಸ್‌ಗೆ ರಾಷ್ಟ್ರ ಧ್ವಜ ಕಟ್ಟಲು ಹೋಗಿದ್ದರು.

ಎರಡು ಮಹಡಿಯ ಕಟ್ಟಡದ ನೆಲಮಹಡಿಯಲ್ಲಿ ಇವರು ವಾಸವಿದ್ದರು. ಪತ್ನಿ ವೈಶಾಲಿ ಹಾಗೂ ಎರಡು ವರ್ಷದ ಮಗಳು ಮತ್ತು ಪೋಷಕರ ಜೊತೆ ವಿಶ್ವಾಸ್ ವಾಸವಿದ್ದರು.

ನಿನ್ನೆ ಮಧ್ಯಾಹ್ನ 1.45ರ ಸುಮಾರಿಗೆ ವಿಶ್ವಾಸ್‌ ಟೆರೇಸ್‌ನ ಅಡ್ಡಗೋಡೆಯನ್ನು ಏರಿ ಧ್ವಜ ಹಾರಿಸುವ ಸಲುವಾಗಿ ಕೋಲು ಕಟ್ಟಲು ತೆರಳಿದರು. ಈ ವೇಳೆ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದರು ಎಂದು ಪೊಲೀಸರು ಹೇಳಿದ್ದಾರೆ. ನಾರಾಯಣ ಭಟ್ ಹಾಗೂ ವೈಶಾಲಿ ತಕ್ಷಣ ವಿಶ್ವಾಸ್ ಅವರನ್ನು ಆಸ್ಪತ್ರೆಗೆ ಸಾಗಿಸಿದರು, ತಲೆಗೆ ಬಿದ್ದ ಗಂಭೀರ ಗಾಯದಿಂದಾಗಿ ಅವರು ಮೃತಪಟ್ಟದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

vtv vitla
- Advertisement -

Related news

error: Content is protected !!