Thursday, May 2, 2024
spot_imgspot_img
spot_imgspot_img

ರಾಷ್ಟ್ರಪತಿಯಿಂದ ಅರ್ಜುನ ಪುರಸ್ಕಾರ ಸ್ವೀಕರಿಸಿದ ಕನ್ನಡಿಗ ಸುಹಾಸ್​ ಯತಿರಾಜ್

- Advertisement -G L Acharya panikkar
- Advertisement -

ದೆಹಲಿ: ಪ್ಯಾರಾಲಿಂಪಿಯನ್ ಸುಹಾಸ್​ ಯತಿರಾಜ್​ ಅವರಿಗೆ ನವದೆಹಲಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಅರ್ಜುನ ಪುರಸ್ಕಾರ ಪ್ರದಾನ ಮಾಡಿದ್ದಾರೆ.

2020ರ ಟೋಕಿಯೋ ಪ್ಯಾರಾಲಿಂಪಿಕ್ಸ್‌ನ ಬ್ಯಾಡ್ಮಿಂಟನ್​ ಸಿಂಗಲ್ಸ್​ನಲ್ಲಿ ​ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್ ಅವರು ಮೂಲತಃ ಕರ್ನಾಟಕದ ಹಾಸನ ಜಿಲ್ಲೆಯವರಾಗಿದ್ದು, ಪ್ರಸ್ತುತ ಉತ್ತರ ಪ್ರದೇಶದ ಗೌತಮಬುದ್ಧ ನಗರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನು ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಪಡೆದ ದೇಶದ ಮೊದಲ ಐಎಎಸ್​ ಅಧಿಕಾರಿ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.

ಕೆಲವು ದಿನಗಳ ಹಿಂದೆ ಅರ್ಜುನ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟಗೊಂಡಿದ್ದು, ಅದರಲ್ಲಿ 35 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!