Wednesday, May 15, 2024
spot_imgspot_img
spot_imgspot_img

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ!

- Advertisement -G L Acharya panikkar
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೆಂಗ್ಯೂ ಜ್ವರದ ಆತಂಕ ಹೆಚ್ಚಾಗಿದೆ. ಅಕ್ಟೋಬರ್​ ಒಂದೇ ತಿಂಗಳಲ್ಲಿ ಬರೋಬ್ಬರಿ 1200 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಇಲ್ಲಿಯವರೆಗೆ 1530 ಮಂದಿ ಈ ಜ್ವರ ಪೀಡಿತರಾಗಿದ್ದಾರೆ. ಅದರಲ್ಲೂ ಕಳೆದ ನಾಲ್ಕು ವರ್ಷದಲ್ಲಿ ಒಂದು ತಿಂಗಳಲ್ಲಿ ಇಷ್ಟು ಸಂಖ್ಯೆಯ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಇದೇ ಮೊದಲಬಾರಿ ಎಂದು ಹೇಳಲಾಗಿದೆ.

ಸೋಮವಾರ ಡೆಂಗ್ಯೂದಿಂದ ಐದು ಮಂದಿ ಮೃತಪಟ್ಟಿದ್ದಾರೆ. ಅಲ್ಲಿಗೆ ಡೆಂಗ್ಯೂದಿಂದ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಡೆಂಗ್ಯೂ ಸೊಳ್ಳೆಯಿಂದ ಹರಡುವ ರೋಗವಾಗಿದ್ದು, ಇದಕ್ಕೆ ಸಂಬಂಧಪಟ್ಟ ಡಾಟಾವನ್ನು ದಕ್ಷಿಣ ದೆಹಲಿ ಮುನ್ಸಿಪಲ್​ ಕಾರ್ಪೋರೇಶನ್​ ಸೋಮವಾರ ಬಿಡುಗಡೆ ಮಾಡಿದೆ. ಅದರ ಅನ್ವಯ ಅ.30ರವರೆಗೆ ದೆಹಲಿಯಲ್ಲಿ 1537 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಸೊಳ್ಳೆಗಳಿಂದ ಬರುವ ಡೆಂಗ್ಯೂ ರೋಗ ದೆಹಲಿಯಲ್ಲಿ ಹೆಚ್ಚುತ್ತಿರುವ ಬೆನ್ನಲ್ಲೇ ನಿನ್ನೆ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಪರಿಶೀಲನಾ ಸಭೆ ನಡೆಸಿದ್ದಾರೆ. ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮತ್ತು ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು, ಸಚಿವರೊಂದಿಗೆ ಚರ್ಚಿಸಿದ್ದಾರೆ.

- Advertisement -

Related news

error: Content is protected !!