Monday, May 6, 2024
spot_imgspot_img
spot_imgspot_img

ರೈಲು, ಬಸ್‌ ನಿಲ್ದಾಣದಲ್ಲೂ ಕೊರೊನಾ ಲಸಿಕೆ ಕೇಂದ್ರ ಸ್ಥಾಪನೆ; ಕೇಂದ್ರ ಸರ್ಕಾರ ಸೂಚನೆ

- Advertisement -G L Acharya panikkar
- Advertisement -

ನವದೆಹಲಿ: ಕೊರೊನಾ ಲಸಿಕೆ ಕೇಂದ್ರವನ್ನು ಬಸ್‌ ನಿಲ್ದಾಣ ಹಾಗೂ ರೇಲ್ವೇ ನಿಲ್ದಾಣದಲ್ಲಿಯೂ ಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಈ ಕುರಿತು ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯಾ ಸೂಚನೆ ನೀಡಿ ರಾಜ್ಯದ ಆರೋಗ್ಯ ಸಚಿವರೊಂದಿಗೆ ಸಭೆಯನ್ನು ನಡೆಸಿದ್ದಾರೆ. .

ಪ್ರಸ್ತುತ ದೇಶದಲ್ಲಿ ಶೇಕಡ 79 ರಷ್ಟು ವಯಸ್ಕರು ಮೊದಲ ಡೋಸ್‌ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ ಹಾಗೂ ಶೇಕಡ 38 ರಷ್ಟು ಮಂದಿ ಎರಡೂ ಡೋಸ್‌ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಸುಮಾರು 12 ಕೋಟಿಗೂ ಅಧಿಕ ಮಂದಿ ತಮ್ಮ ಎರಡನೇ ಡೋಸ್‌ ಲಸಿಕೆ ಪಡೆಯುವ ಅವಧಿ ಮುಗಿದಿದ್ದರೂ ಕೂಡಾ ಲಸಿಕೆಯನ್ನು ಇನ್ನೂ ಕೂಡಾ ಪಡೆದುಕೊಂಡಿಲ್ಲ.

ಇನ್ನು ಎರಡನೇ ಡೋಸ್‌ ಲಸಿಕೆಯನ್ನು ಪಡೆದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಆರೋಗ್ಯ ಸಚಿವರುಗಳಿಗೆ ಕೇಂದ್ರ ಸಚಿವರು ಸೂಚನೆ ನೀಡಿದ್ದು, ಹರ್‌ ಘರ್‌ ದಸ್ತಕ್‌ ಅಭಿಯಾನದ ಸಂದರ್ಭದಲ್ಲಿ ಕೊರೊನಾ ವಿರುದ್ಧ ಲಸಿಕೆಯನ್ನು ಹಲವಾರು ಮಂದಿ ಪಡೆದುಕೊಂಡಿದ್ದಾರೆ. ಆದರೆ ಈವರೆಗೂ ಎರಡನೇ ಡೋಸ್‌ ಕೋವಿಡ್‌ ಲಸಿಕೆಯನ್ನು ಹಾಕಿಸಿಕೊಂಡಿಲ್ಲ. ಹಾಗಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.

- Advertisement -

Related news

error: Content is protected !!