Saturday, May 4, 2024
spot_imgspot_img
spot_imgspot_img

ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಅಗತ್ಯ ಇಲ್ಲ – ಗೃಹ ಸಚಿವ ಆರಗ ಜ್ಞಾನೇಂದ್ರ

- Advertisement -G L Acharya panikkar
- Advertisement -
vtv vitla

ಚಿತ್ರದುರ್ಗ: ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ರೂಪಿಸಲು ಸಂಘಪರಿವಾರದ ಸಂಘಟನೆಗಳು ಮನವಿ ಮಾಡಿವೆ. ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಈ ಅಂಶ ಅಡಕವಾಗಿದೆ. ಹೀಗಾಗಿ, ಪ್ರತ್ಯೇಕ ಕಾನೂನು ರೂಪಿಸುವ ಅನಿವಾರ್ಯತೆ ಸದ್ಯ ಇಲ್ಲ. ಆದರೂ ಪರಿಶೀಲನೆ ಮಾಡಲಾಗುವುದು’ ಎಂದರು.

’ಇಷ್ಟವಾದ ಧರ್ಮ ಅನುಸರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಮತ್ತೊಂದು ಧರ್ಮ ಅನುಸರಿಸುವ ಮುನ್ನ ಅರ್ಜಿ ಸಲ್ಲಿಸಬೇಕು. ಆಮಿಷವೇ ಅಥವಾ ಬಲವಂತದ ಮತಾಂತರವೇ ಎಂಬುದನ್ನು ಪರಿಶೀಲಿಸಿ ಅನುಮತಿ ನೀಡಲಾಗುವುದು. ಆದರೆ, ಚಿತ್ರದುರ್ಗ ಸೇರಿ ರಾಜ್ಯದ ಹಲವೆಡೆ ಅಮಿಷ ಮತಾಂತರ ಅವ್ಯಾಹತವಾಗಿ ನಡೆಯುತ್ತಿದೆ. ಮಠಾಧೀಶರ ಕೋರಿಕೆ ಮೇರೆಗೆ ಕಾನೂನು ರೂಪಿಸಲಾಗಿದೆ. ಮತಾಂತರಕ್ಕೆ ಸಂಬಂಧಿಸಿದಂತೆ ರಕ್ತ ಸಂಬಂಧಿಗಳು ದೂರು ನೀಡಬೇಕು’ ಎಂದು ಹೇಳಿದರು.

- Advertisement -

Related news

error: Content is protected !!