- Advertisement -
- Advertisement -



ನೆಲಮಂಗಲ: ಲಾರಿ ಚಾಲಕನ ನಿರ್ಲಕ್ಷ್ಯದಿಂದ ಟೋಲ್ ಸೆಕ್ಯುರಿಟಿ ಗಾರ್ಡ್ ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲೇ ಸೆಕ್ಯುರಿಟಿ ಗಾರ್ಡ್ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಅರಿಸಿನಕುಂಟೆ ನವಯುಗ ಟೋಲ್ ಬಳಿ ಸಂಭವಿಸಿದೆ. ಮತ್ತೋರ್ವ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತ ವ್ಯಕ್ತಿ ಸೆಕ್ಯುರಿಟಿ ಗಾರ್ಡ್ ನಂಜುಂಡೇಗೌಡ (50) ಎನ್ನಲಾಗಿದೆ.

ನಂಜುಂಡೇಗೌಡ ಸದ್ಯ ಅರಿಶಿನಕುಂಟೆ ಗ್ರಾಮದಲ್ಲಿ ವಾಸವಿದ್ದು, ಟೋಲ್ನಲ್ಲಿ ಕೆಲಸ ಮಾಡುತ್ತಿದ್ದರು. ಗಾಯಳು ಸತೀಶ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

- Advertisement -








