- Advertisement -
- Advertisement -


ಮಡಿಕೇರಿ: ಮುಂಜಾನೆ ವಾಕಿಂಗ್ ಗೆ ತೆರಳಿದ್ದ ಮಹಿಳೆಯೊಬ್ಬರ ಮೇಲೆ ಲಾರಿಯೊಂದು ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗದ್ದೆಹಳ್ಳ ಬಳಿ ಸಂಭವಿಸಿದೆ. ಮೃತ ಮಹಿಳೆಯನ್ನು ಹಾಸನದ ರಾಮನಾಥಪುರದ ದಿಲ್ ಶಾದ್ (53) ಎನ್ನಲಾಗಿದೆ.
ಮೈಸೂರು ಕಡೆಯಿಂದ ಟಿವಿಎಸ್ ದ್ವಿಚಕ್ರವಾಹನ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ವಾಯುವಿಹಾರಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಹರಿದು ಮಹಿಳೆಯ ಮೃತದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



- Advertisement -








