Friday, July 24, 2026
spot_imgspot_img
spot_imgspot_img

ವಾರಾಣಸಿಯಲ್ಲಿ ಬಿಜೆಪಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ

- Advertisement -
- Advertisement -
vtv vitla
vtv vitla

ವಾರಾಣಸಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎರಡು ದಿನಗಳಿಂದ ವಾರಾಣಸಿ ಪ್ರವಾಸದಲ್ಲಿದ್ದಾರೆ. ಮೊದಲ ದಿನ ಅವರು ಕಾಶಿ ವಿಶ್ವನಾಥ ಕಾರಿಡಾರ್​ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ಬಳಿಕ ಮಧ್ಯರಾತ್ರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರೊಟ್ಟಿಗೆ ಸೇರಿ ಬನಾರಸ್​ ರೈಲ್ವೆ ನಿಲ್ದಾಣವನ್ನು ಪರಿಶೀಲನೆ ನಡೆಸಿದರು. ಹಾಗೇ, ನಿನ್ನೆ ಬೆಳಗ್ಗೆ ವಾರಾಣಸಿಯಲ್ಲಿ, ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿಗಳು (ವಿವಿಧ ರಾಜ್ಯಗಳ) ಮತ್ತು ಜಿಲ್ಲೆ ಮತ್ತು ಮಂಡಲ್​ ಅಧ್ಯಕ್ಷರ ಜತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಭಾಗವಹಿಸಿದ್ದರು.

ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಂದಿನ ಅವಧಿಗೂ ಅಧಿಕಾರ ಉಳಿಸಿಕೊಳ್ಳಲು ಅಲ್ಲಿ ಬಿಜೆಪಿ ಈಗಾಗಲೇ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಅದಕ್ಕೆ ಸಾಕ್ಷಿಯೆಂಬಂತೆ ಪ್ರಧಾನಮಂತ್ರಿ ಮೋದಿಯವರು ಪದೇಪದೆ ಅಲ್ಲಿಗೆ ತೆರಳಿ ಸಾಲುಸಾಲು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಇತ್ತೀಚೆಗೆ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದ ಅವರು, ಬಳಿಕ ಸರಯೂ ರಾಷ್ಟ್ರೀಯ ನಾಲೆ ಯೋಜನೆಗೆ ಉದ್ಘಾಟನೆ ಮಾಡಿದ್ದಾರೆ. ನಿನ್ನೆ ಅವರ ಕನಸಿನ ಯೋಜನೆಯಾದ ಕಾಶಿ ವಿಶ್ವನಾಥ ಕಾರಿಡಾರ್​ನ್ನು ಲೋಕಾರ್ಪಣೆ ಮಾಡಿದ್ದಾರೆ. ಉತ್ತರ ಪ್ರದೇಶ ಚುನಾವಣೆ ಪೂರ್ವ ಮಾಡಿದ ಕೆಲವು ಸಮೀಕ್ಷೆಗಳು, ಅಲ್ಲಿ ಬಿಜೆಪಿ ಮತ್ತು ಅಖಿಲೇಶ್​ ಯಾದವ್ ನೇತೃತ್ವದ ಸಮಾಜವಾದಿ ಪಕ್ಷಗಳ ನಡುವೆ ನೇರ ಹಣಾಹಣಿ ನಡೆಯಲಿದೆ ಎಂದು ವರದಿ ನೀಡಿವೆ.

vtv vitla
vtv vitla
vtv vitla
- Advertisement -

Related news

error: Content is protected !!