Wednesday, June 17, 2026
spot_imgspot_img
spot_imgspot_img

ವಿಟ್ಲ: ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಸಾಗಾಟ ಪತ್ತೆ; ಆರೋಪಿ ಹಾಗೂ ಸ್ವತ್ತುಗಳು ವಿಟ್ಲ ಪೋಲೀಸರ ವಶಕ್ಕೆ..!

- Advertisement -
- Advertisement -

ವಿಟ್ಲ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ‌.

ಲಾರಿ ಚಾಲಕ ಮಡಿಕೇರಿ ಮೂಲದ ಚಂದ್ರೇಶ್ ಬಂಧಿತ ಆರೋಪಿಯಾಗಿದ್ದಾನೆ. ಈತ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿಗೆ ಲಾರಿಯಲ್ಲಿ ಸುಮಾರು 15 ಟನ್ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ಆರೋಪಿ ಮತ್ತು 313 ಗೋಣಿಗಳ 15 ಟನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪ್ರಭಾರ ಆಹಾರ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರು ಠಾಣೆಗೆ ದೂರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಲಾರಿ ಮತ್ತು ಅಕ್ಕಿಯ ಮೌಲ್ಯ 23 ಲಕ್ಷ ರೂ.ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!