Tuesday, July 1, 2025
spot_imgspot_img
spot_imgspot_img

ವಿಟ್ಲ : ಅಪ್ರಾಪ್ತೆಯ ಕಿಡ್ನಾಪ್, ಅತ್ಯಾಚಾರ; ಪ್ರತ್ಯೇಕ ಪ್ರಕರಣ ದಾಖಲು; ವಿಟ್ಲ ಪೊಲೀಸರಿಂದ ಇಬ್ಬರ ಬಂಧನ, ಉಳಿದವರಿಗಾಗಿ ತೀವ್ರ ಶೋಧ

- Advertisement -
- Advertisement -

ವಿಟ್ಲ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಓರ್ವ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ಳಾಡು ಎಂಬಲ್ಲಿ ನಡೆದಿದೆ.

ಕೊಳ್ನಾಡು ಗ್ರಾಮದ ಕುಳಾಲು ನಿವಾಸಿ ಸಂಶೀರ್ ಎಂಬಾತ ಬಂಧಿತ ಆರೋಪಿ.

ಆರೋಪಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನೆಪ ಮಾಡಿ ಬಳಿಕ ಮನೆಗೆ ಬಂದು ಬಲಾತ್ಕಾರವಾಗಿ ದೈಹಿಕ ಸಂಪರ್ಕ ಮಾಡಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.

ಈ ಹಿನ್ನೆಲೆ ಬಂದಿರುವ ದೂರಿನಂತೆ ವಿಟ್ಲ ಪೋಲಿಸ್ ಇನ್ಸ್ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ಎಸ್ಐ ಸಂದೀಪ್ ಶೆಟ್ಟಿ ಅವರ ತಂಡ ಆರೋಪಿಯನ್ನು ಬಂಧಿಸಿದೆ. ಮಾತ್ರವಲ್ಲದೇ ನಾಲ್ವರು ಇದೇ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ನಾಲ್ವರಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಉಳಿದ ಮೂವರಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

- Advertisement -

Related news

error: Content is protected !!