Tuesday, June 23, 2026
spot_imgspot_img
spot_imgspot_img

ವಿಟ್ಲ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಆಟೋ ಚಾಲಕ ವಿಟ್ಲ ಪೊಲೀಸರ ವಶಕ್ಕೆ..!

- Advertisement -
- Advertisement -

ವಿಟ್ಲ: ಅಪ್ರಾಪ್ತ ಬಾಲಕಿಗೆಯೋರ್ವಳಿಗೆ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೋರ್ವನನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಆಟೋ ಚಾಲಕ ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ಘಾನ್ ಎನ್ನಲಾಗಿದೆ.

ಸಫ್ಘಾನ್ ಕೆಲ ಸಮಯಗಳ ಹಿಂದಷ್ಟೇ ಲೈಂಗಿಕ ಕಿರುಕುಳ, ಜೀವಬೆದರಿಕೆ ಪ್ರಕರಣದಡಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು.ಈ ಮೊದಲು ಸಫ್ಘಾನ್ ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು ಹೇಳಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ದರ್ಬೆ ಹರ್ಷ ಇಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಕುತ್ತಿಗೆ ಹಿಡಿದು ಮಾನಭಂಗಕ್ಕೆ ಯತ್ನಿಸಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿದ್ದ ಎಂದು ಈ ಮೊದಲು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಶಾಲಾ ಬಾಲಕಿಯನ್ನು ಹಿಂಬಾಲಿಸಿ ಆಕೆಗೆ ಕಿರುಕುಳ ನೀಡಿ ಜೀವಬೆದರಿಕೆ ಹಾಕಿದ್ದಾನೆನ್ನಲಾಗಿದೆ. ಈ ಬಗ್ಗೆ ಬಾಲಕಿ ನೀಡಿದ ದೂರಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!