Tuesday, April 16, 2024
spot_imgspot_img
spot_imgspot_img

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆಟೋ ಚಾಲಕ ಅರೆಸ್ಟ್..!

- Advertisement -G L Acharya panikkar
- Advertisement -

ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ‌ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು  ವಿಟ್ಲ ಠಾಣಾ  ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿ ಕಂಬಳಬೆಟ್ಟು ನಿವಾಸಿ ಅಬ್ದುಲ್‌ ನಾಸಿರ್‌ ಎನ್ನಲಾಗಿದೆ. ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ  ಅಬ್ದುಲ್ ನಾಸಿರ್  ಆ ಬಳಿಕ ಆಕೆಯ ಮನೆಗೆ ಆಗಾಗ ಬರುತ್ತಿದ್ದ. ಮನೆಗೆ ಬಾರದಂತೆ ಆತನಿಗೆ ಎಚ್ಚರಿಕೆ ನೀಡಿದ್ದರು.

ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಬಾಲಕಿಯ ತಾಯಿ ವಿಟ್ಲ ಠಾಣಾ ಪೊಲೀಸರಿಗೆ ನೀಡಿದ‌ ದೂರಿನಲ್ಲಿ ವಿವರಿಸಿದ್ದಾರೆ. ಆರೋಪಿ ವಿರುದ್ದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!