
ವಿಟ್ಲ: 2 ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಮೇಲೆ ತಂದೆಯಿಂದಲೇ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆದಿದ್ದು, ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಹಾಗೂ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಂದು ಶಿಕ್ಷೆ ಪ್ರಕಟಿಸಿದೆ.
ವಿಟ್ಲದ ಪೆರುವಾಯಿ ನಿವಾಸಿ ಅಬ್ದುಲ್ ಅಜೀಜ್ (70) ಆರೋಪಿ.

2020 ಮಾರ್ಚ್ ನಲ್ಲಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆಟೋಪಿಯನ್ನು ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ್ದು ಆರೋಪಿಗೆ ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಸಾಕ್ಷ್ಯಧಾರಗಳು ಹಾಗೂ ಕೂಲಂಕುಷ ತನಿಖೆಯನ್ನು ಆಧರಿಸಿ ಘನ ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಎಮ್. ರಾಧಕೃಷ್ಣರವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಹಾಗೂ ರೂ.25000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಈ ಪ್ರಕರಣದಲ್ಲಿ ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ರವರು ಪೂರ್ಣ ಪ್ರಮಾಣದ ತನಿಖೆ ನಡೆಸಿ, ಆರೋಪಿಯ ವಿರುದ್ದ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಶ್ರೀ ವೆಂಕಟರಮಣ ಸ್ವಾಮಿ, ಸರ್ಕಾರಿ ಅಭಿಯೋಜಕರು, ಸರ್ಕಾರದ ಪರವಾಗಿ ಘನ ನ್ಯಾಯಾಲಯಲ್ಲಿ ವಾದಿಸಿದ್ದಾರೆ.
