Thursday, May 2, 2024
spot_imgspot_img
spot_imgspot_img

ವಿಟ್ಲ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆಗೆಯ್ಯುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿ.ಹಿಂ.ಪ ನೀಡಿದ್ದ ಮನವಿಗೆ ಸ್ಪಂದನೆ – ಸೂಕ್ತ ಕ್ರಮಕ್ಕಾಗಿ ಸಚಿವರಿಂದ ಜಿಲ್ಲಾಧಿಕಾರಿಗೆ ಮನವಿ

- Advertisement -G L Acharya panikkar
- Advertisement -

ವಿಟ್ಲ: ಇತ್ತೀಚಿಗೆ ಕನ್ಯಾನದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಲವ್ ಜಿಹಾದ್‌ಗೆ ಬಾಲಕಿ ಬಲಿಯಾಗಿದ್ದಾಳೆ ಎಂದು ಆರೋಪಿಸಿದ್ದು ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಆಗ್ರಹಿತ್ತು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ನ ಪ್ರಮುಖರು ಕರ್ನಾಟಕ ಸರಕಾರದ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನಿಲ್ ಕುಮಾರ್‌ರವರ ಸಾರ್ವಜನಿಕ ಭೇಟಿಯಲ್ಲಿ ಅಪ್ರಾಪ್ತ ಬಾಲಕಿ ಆತ್ಮಿಕಾ ಸಾವು ಬಗ್ಗೆ ಸಿಐಡಿ ತನಿಖೆಗೆ ಆಗ್ರಹಿಸಿ ಹಾಗೂ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆ ಮನವಿಯನ್ನು ನೀಡಿದ್ದಾರೆ.

ಈ ಮನವಿಯನ್ನು ಪುರಸ್ಕರಿಸಿದ ಸಚಿವ ತನಗೆ ಸಲ್ಲಿಸಿದ ಮನವಿಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲಾಗಿದೆ. ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದ್ದೇನೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

- Advertisement -

Related news

error: Content is protected !!