Friday, April 19, 2024
spot_imgspot_img
spot_imgspot_img

ವಿಟ್ಲ: ಅಳಕೆಮಜಲಿನಲ್ಲಿ 2 ಕಾರು ಹಾಗೂ 5 ಬೈಕ್ ನಡುವೆ ಸರಣಿ ಅಪಘಾತ

- Advertisement -G L Acharya panikkar
- Advertisement -
vtv vitla
vtv vitla

ವಿಟ್ಲ: 2 ಕಾರು ಹಾಗೂ 5 ಬೈಕ್’ಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಅಳಕೆಮಜಲಿನಲ್ಲಿ ನಡೆದಿದೆ. ವಿರುದ್ಧ ದಿಕ್ಕಿನಿಂದ ಬಂದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಬೇರೆ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಎಂಬವರ ಇನ್ನೋವಾ ಕ್ರಿಸ್ಟಾ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡೂ ವಾಹನಗಳ ಮುಂಭಾಗ ಜಖಂಗೊ0ಡಿದೆ.

ಚಾಲಕ ನಶೆಯ ಅಮಲಿನಲ್ಲಿದ್ದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!