Sunday, May 5, 2024
spot_imgspot_img
spot_imgspot_img

ವಿಟ್ಲ: ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಶತಸಮೃದ್ಧಿ ಶತಮಾನೋತ್ಸವದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

- Advertisement -G L Acharya panikkar
- Advertisement -
vtv vitla

ವಿಟ್ಲ: ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಶತಸಮೃದ್ಧಿ ಶತಮಾನೋತ್ಸವದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಇಂದು ಅಳಿಕೆಯಲ್ಲಿ ನಡೆಯಿತು.

ಕನಾ೯ಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ., ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿ., ಮಂಗಳೂರು ಇದರ ಅಧ್ಯಕ್ಷರು, ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ.), ಮಂಗಳೂರು ಇದರ ಮೆನೇಜಿಂಗ್ ಟ್ರಸ್ಟಿ, “ಸಹಕಾರ ರತ್ನ” ಎಂ.ಎನ್. ರಾಜೇಂದ್ರ ಕುಮಾರ್‌ ನೂತನ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಸಭಾಧ್ಯಕ್ಷತೆಯನ್ನು ವಹಿಸಿದರು.

ಕಾರ್ಯಕ್ರಮವನ್ನು ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್, ಅಳಿಕೆ ‌ಇದರ ಅಧ್ಯಕ್ಷರು ಕೆ.ಎಸ್.ಕೃಷ್ಣ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಗೋದಾಮು ಉದ್ಘಾಟನೆಯನ್ನು ಸಂಸದರು, ಮಂಗಳೂರು ಲೋಕಸಭಾ ಕ್ಷೇತ್ರ ಹಾಗೂ ಬಿ.ಜೆ.ಪಿ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೆರವೇರಿಸಿ, ಗಣಕೀಕರಣ ಉದ್ಘಾಟನೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಸಂಜೀವ ಮಠಂದೂರು, ಆಡಳಿತ ಮಂಡಳಿಯ ಸಭಾಂಗಣ ಉದ್ಘಾಟನೆಯನ್ನು ದ.ಕ.ಜಿ.ಕೇ.ಸ. ಬ್ಯಾಂಕ್‌ ನಿ. ಮಂಗಳೂರು ನಿದೇ೯ಶಕರು ಟಿ.ಜಿ. ರಾಜಾರಾಮ ಭಟ್ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ದ.ಕ ಜಿ.ಸಹಕಾರಿ ಯೂನಿಯನ್ ಲಿ.,ಮಂಗಳೂರು ಇದರ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಅಳಿಕೆ ಗ್ರಾ.ಪಂ ಅಧ್ಯಕ್ಷೆ ಸರಸ್ವತಿ ಕೆ., ಸಹಕಾರ ಸಂಘಗಳ ಸಹಾಯಕ ನಿಬಂಧಕರು ಸುಧೀರ್‍ ಕುಮಾರ್‍ ಜೆ., ಬಂಟ್ವಾಳ ಸಹಕಾರ ಅಭಿವೃದ್ದಿ ಅಧಿಕಾರಿ ಗೋಪಾಲ ಎನ್.ಜೆ, ದ.ಕ ಜಿಲ್ಲಾ ಕೇಂದ್ರ ಸಹಖಾರಿ ಬ್ಯಾಂಕ್‌ ಮಂಗಳೂರಿನ ನಿರ್ದೇಶಕ ಶಶಿಕುಮಾರ್‌ ರೈ ಬಾಲ್ಯೊಟ್ಟು, ಸ್ಕ್ಯಾಟ್ಸ್‌ ಮಂಗಳೂರು ಅಧ್ಯಕ್ಷ ರವೀಂದ್ರ ಕಂಬಳಿ, ವಿಟ್ಲ ವಲಯ ಮೇಲ್ವಿಚಾರಕ ಯೋಗೀಶ್‌. ಹೆಚ್‌, ಕಾರ್ಯನಿರ್ವಣಾಧಿಕಾರಿ ಚಂದ್ರಹಾಸ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆ ನಿವೃತ್ತ ಪ್ರಾಂಶುಪಾಲ ಬಿ.ನಾರಾಯಣ ರಾವ್, ಕೆ.ಗೋವಿಂದ ಭಟ್ ಕೋಡಿಜಾಲು, ವಿ.ಗೋವಿಂದ ಭಟ್ ವಳಬೈಲು, ವಿ.ಈಶ್ವರ ಭಟ್ ವದ್ವ, ಮುಳಿಯ ನಾರಾಯಣ ಭಟ್, ಚಂದ್ರನಾಥ ಆಳ್ವ ಮಿತ್ತಳಿಕೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಹಾಗೂ ಮಾಜಿ ನಿರ್ದೇಶಕರುಗಳಿಗೆ ಮತ್ತು ನಿವೃತ್ತ ಸಿಬ್ಬಂದಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಬಳಿಕ ತುಳುನಾಡ ಗಾನ ಗಾನ ಗಂಧರ್ವ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದಿಂದ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ನಡೆಯಿತು.

- Advertisement -

Related news

error: Content is protected !!