Sunday, August 2, 2026
spot_imgspot_img
spot_imgspot_img

ವಿಟ್ಲ: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಆಟೋ ರಿಕ್ಷಾ ಚಾಲಕ ಮೃತ್ಯು

- Advertisement -
- Advertisement -

ವಿಟ್ಲ: ಪುಣಚ ಗ್ರಾಮದ ಮಣಿಲ ಎಂಬಲ್ಲಿ ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಮೃತಪಟ್ಟಿದ್ದಾರೆ.

ಆಟೋ ಚಾಲಕ, ಪರಿಯಾಲ್ತಡ್ಕ ನಿವಾಸಿ ಅಶ್ರಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರು ರಸ್ತೆ ಬದಿಯ ಪಕ್ಕಕ್ಕೆ ಅಪ್ಪಳಿಸಿದೆ.

ಆಟೋ ಚಾಲಕ ಅಶ್ರಫ್ ಅವರ ಸ್ಥಿತಿ ಗಂಭೀರವಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!