Tuesday, April 23, 2024
spot_imgspot_img
spot_imgspot_img

ವಿಟ್ಲ: ಆರೋಪಿಯ ಸ್ಮರಣಾರ್ಥ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆ.!! ಶಾಲಾ ಮುಖ್ಯೋಪಾಧ್ಯಾಯರಿಂದ ಸ್ಪಷ್ಟನೆ.?

- Advertisement -G L Acharya panikkar
- Advertisement -

ವಿಟ್ಲ: ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯ ಸ್ಮರಣಾರ್ಥ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡವುದಾಗಿ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ ಶಾಲಾ ಮುಖ್ಯೋಪಾಧ್ಯಾಯರು ಇಂತಹ ಯಾವುದೇ ಕಾರ್ಯಕ್ರಮಕ್ಕೆ ಶಾಲೆಯಲ್ಲಿ ಅನುಮತಿ ನೀಡಿಲ್ಲ ಎಂದಿದ್ದಾರೆ.

ನಾಸಿರ್ ಎಂಬಾತನು ಅನ್ವರ್ ಮುಗುಳಿ ಎಂಬ ವ್ಯಕ್ತಿಯ ಸ್ಮರಣಾರ್ಥ ಮಿತ್ತನಡ್ಕ ಸರಕಾರಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎನ್ನುವ ಆಡಿಯೋ ಒಂದನ್ನು ರೆಕಾರ್ಡ್ ಮಾಡಿ ಅದನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಇದಕ್ಕೆ ಪ್ರತಿಕ್ರಿಯಿಸಿದ ಮಿತ್ತನಡ್ಕ ಶಾಲಾ ಮುಖ್ಯೋಪಾಧ್ಯಾಯರು ” ಒಂದು ಸ್ಥಳೀಯರು ಬಂದು ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನ ನಾವು ಮಕ್ಕಳಿಗೆ ಸಿಹಿತಿಂಡಿ ವಿತರಣೆ ಹಾಗೂ ಕೆಲ ಸಾಧಕರಿಗೆ ಸನ್ಮಾನ ಮಾಡುತ್ತೆವೆ ಎಂದಷ್ಟೇ ತಿಳಿಸಿದ್ದರು ಇದಕ್ಕೆ ನಾವು ಯಾವುದೇ ಪ್ರತಿಕ್ರಿಸಿಲ್ಲ” ಎಂದು ತಿಳಿಸಿದ್ದಾರೆ. ಆಡಿಯೋದಲ್ಲಿ ಇರುವ ಕಾರ್ಯಕ್ರಮಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದಿದ್ದಾರೆ.

ಪ್ರಕರಣದ ಹಿನ್ನಲೆ.!?
ಕರೋಪಾಡಿ ಗ್ರಾಮದಲ್ಲಿ ಕ್ರಿಮಿನಲ್ ಚಟುವಟಿಕೆ, ದರೋಡೆ, ಗಾಂಜಾ, ರಕ್ತಚಂದನ ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ಅನ್ವರ್ ಮುಗುಳಿ ಎಂಬ ವ್ಯಕ್ತಿಯ ಸ್ಮರಣಾರ್ಥ ಮಿತ್ತನಡ್ಕ ಸರಕಾರಿ ಶಾಲೆಗಳಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡವ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಈತನು ಕರ್ನಾಟಕದಿಂದ ಕೇರಳಕ್ಕೆ ಹೋಗುವ ಲಾರಿಗಳನ್ನು ಗಡಿಭಾಗದಲ್ಲಿ ನಿಲ್ಲಿಸಿ ಹಫ್ತಾ ವಸೂಲಿ ಮಾಡುತ್ತಿದ್ದ ಎನ್ನುವ ಆರೋಪವು ಇದೆ. ಕಳೆದ ವರ್ಷ ಈತನು ಲಾರಿಯಡಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಅನ್ವರ್ ಮುಗುಳಿ ಕ್ರಿಮಿನಲ್ ಹಿನ್ನಲೆ ಹೊಂದಿದ್ದು, ಈತನ ಸವಿನೆನಪಿಗಾಗಿ ಸರಕಾರಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

- Advertisement -

Related news

error: Content is protected !!