Monday, June 30, 2025
spot_imgspot_img
spot_imgspot_img

ವಿಟ್ಲ: ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಟ; ಪೊಲೀಸರಿಗೆ ಒಪ್ಪಿಸಿದ ಹಿಂದೂ ಪರ ಸಂಘಟನಾ ಕಾರ್ಯಕರ್ತರು

- Advertisement -
- Advertisement -

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದವರನ್ನು ಹಿಂದೂ ಪರ ಕಾರ್ಯಕರ್ತರು ರೆಡ್ ಹ್ಯಾಂಡ್ ಆಗಿ‌ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಪದವು ಕೋಡಂದೂರು ರಸ್ತೆಯಲ್ಲಿ ನಡೆದಿದೆ.

ಬೆಳ್ಳಂಬೆಳಗ್ಗೆಯೆ ಅಕ್ರಮದಲ್ಲಿ ತೊಡಗಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.‌ ಆಲ್ಟೋ ಕಾರಿನಲ್ಲಿ ಹಿಂಸಾತ್ಮಕವಾಗಿ ಎರಡು ಗೋವುಗಳನ್ನು ಕೂಡಿ ಹಾಕಿ ಸಾಗಾಟ ಮಾಡುತ್ತಿದ್ದರು.

ಇದನ್ನರಿತ ಹಿಂದೂ ಪರ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು‌ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ವಾಹನ ಹಾಗೂ ವಾಹನದ ಮಾಲಕರನ್ನು ತಕ್ಷಣ ಬಂಧಿಸಿ ಸುರತ್ಕಲ್ ಗಂಜೀಮಠ ಮಾದರಿಯಲ್ಲಿ ಆರೋಪಿಗಳ ಆಸ್ತಿ ಜಪ್ತಿ ಮಾಡಬೇಕೆಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!