Monday, April 29, 2024
spot_imgspot_img
spot_imgspot_img

ವಿಟ್ಲ: ಆಸ್ತಿ ವಿಚಾರಕ್ಕೆ ನಡೆದ ಹಲ್ಲೆ ಪ್ರಕರಣ; ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು- ನಾಲ್ವರ ವಿರುದ್ದ ಪ್ರಕರಣ ದಾಖಲು

- Advertisement -G L Acharya panikkar
- Advertisement -
vtv vitla

ವಿಟ್ಲ: ವಿಟ್ಲ ಕಸಬ ಗ್ರಾಮದ ದಾಸರಬೆಟ್ಟು ಎಂಬಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.‌

ದಾಸರಬೆಟ್ಟು ನಿವಾಸಿ ಇಬ್ರಾಹಿಂ ಮೃತಪಟ್ಟವರಾಗಿದ್ದು, ಆರೋಪಿಗಳನ್ನು ಸುಲೈಮಾನ್‌, ಅಬೂಬಕ್ಕರ್‌, ಹಸೈನಾರ್‌, ನಾಸೀರ್‌ ಎಂದು ಗುರುತಿಸಲಾಗಿದೆ. ಅವರ ಪೈಕಿ ಸುಲೈಮಾನ್ ಮತ್ತು ನಾಸೀರ್ ಎಂಬವರನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದು, ಜೈಲಿನಲ್ಲಿದ್ದಾರೆ.

ಘಟನೆಯ ವಿವರ:

ಇಬ್ರಾಹಿಂ ಮತ್ತು ಅವರ ಅಣ್ಣ ದಿ. ಮಮ್ಮದೆ ಬ್ಯಾರಿರವರ ಮಕ್ಕಳಾದ ಸುಲೈಮಾನ್‌, ಅಬೂಬಕ್ಕರ್‌ ಹಾಗೂ ಹಸೈನಾರ್‌ ರವರಿಗೆ ಜಮೀನಿಗೆ ಸಂಬಂಧಿಸಿದಂತೆ ಗಲಾಟೆ ನಡೆಯುತ್ತಿದ್ದು, ಬಳಿಕ ರಾಜಿ ಸಂಧಾನದಲ್ಲಿ ಮುಕ್ತಾಯಗೊಂಡಿತ್ತು. ಮಮ್ಮದೆ ಬ್ಯಾರಿರವರ ಜಮೀನು ನೋಂದಣಿಗೆ ಬಾಕಿ ಇದ್ದು, ಅವರ ಮಕ್ಕಳು ಈ ಬಗ್ಗೆ ತಕರಾರು ಮಾಡುತ್ತಿದ್ದರು. ಫೆಬ್ರವರಿ 21ರಂದು ಇಬ್ರಾಹಿಂ ಬೆಳಿಗ್ಗೆ ತೋಟಕ್ಕೆ ಹೋದ ಸಮಯ ಆರೋಪಿಗಳಾದ ಸುಲೈಮಾನ್‌, ಅಬೂಬಕ್ಕರ್‌ ಹಸೈನಾರ್‌ ಹಾಗೂ ನೆರೆಯ ನಾಸೀರ್‌ ಅವರು ಜಮೀನು ವಿಚಾರದಲ್ಲಿ ಗಲಾಟೆ ನಡೆಸಿದ್ದರು.

ಈ ಸಂದರ್ಭ ಆರೋಪಿಗಳು ತೋಟದಲ್ಲಿದ್ದ ಕಲ್ಲುಗಳನ್ನು ಹಾಗೂ ಮರದ ತುಂಡಿನಿಂದ ಇಬ್ರಾಹಿಂ ಅವರ ಕಡೆ ಎಸೆದಾಗ ಮರದ ತುಂಡು ಅವರ ತಲೆಯ ಬಲಭಾಗಕ್ಕೆ ತಾಗಿ ತಲೆಯ ಒಳಭಾಗಕ್ಕೆ ಗಂಭೀರ ಗಾಯವಾಗಿ ಕುಸಿದು ಬಿದ್ದಿದ್ದಾರೆ. ಇದನ್ನು ನೋಡಿದ ಇಬ್ರಾಹಿಂ ಅವರ ಮಗ ಅಬ್ದುಲ್‌ ಲತೀಫ್‌ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ವಿಟ್ಲ‌ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದರು.

ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ರಾಹಿಂ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಇದೀಗ ನಾಲ್ವರು ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.‌

- Advertisement -

Related news

error: Content is protected !!