- Advertisement -
- Advertisement -

ವಿಟ್ಲ: ಚಂದಳಿಕೆ ವಿದ್ಯಾವರ್ಧಕ ಸಂಘ( ರಿ) ಚಂದಳಿಕೆ ಮತ್ತು ಶಾಲಾ ಅಭಿವೃದ್ಧಿ ಸಮಿತಿ ಚಂದಳಿಕೆ ಶಾಲೆ ಇದರ ಜಂಟಿ ಆಶ್ರಯದಲ್ಲಿ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಚಂದಳಿಕೆ ಶಾಲೆಯಲ್ಲಿ “ಉತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರಾದ ಮುಖ್ಯೋಪಾಧ್ಯಾಯರಾದ ವಿಶ್ವನಾಥ ಗೌಡ ಇವರಿಗೆ ಅಭಿನಂದನಾ ಕಾರ್ಯಕ್ರಮ ಚಂದಳಿಕೆ ಶಾಲೆಯಲ್ಲಿ ನಡೆಯಿತು.

ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಗೌರವಾಧ್ಯಕ್ಷರಾದ ಸುಬ್ರಾಯ ಪೈ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ, ವಿಠಲ ವಿದ್ಯಾವರ್ಧಕ ಸಂಘದ ಸದಸ್ಯ ರವಿಪ್ರಕಾಶ್, ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ನಾರಾಯಣಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪುರಂದರ ಕೂಟೇಲು ಅವರು ಕಾರ್ಯಕ್ರಮ ನಿರೂಪಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷೆ ಸುಮಾ ದೇಜಪ್ಪರವರು ಧನ್ಯವಾದವಿತ್ತರು.


- Advertisement -