Sunday, August 2, 2026
spot_imgspot_img
spot_imgspot_img

ವಿಟ್ಲ: ಕಛೇರಿಯಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ; ವಿಟ್ಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಬಜರಂಗದಳದಿಂದ ಖಂಡನೆ

- Advertisement -
- Advertisement -

ವಿಟ್ಲ: ವಿಟ್ಲದ ವಿಹೆಚ್ ಕಾಂಪ್ಲೆಕ್ಸ್ ನಲ್ಲಿ ಕಚೇರಿಯನ್ನು ಹೊಂದಿರುವ ವಕೀಲ ಉಮ್ಮರ್ ಕೆ ಎಂಬಾತ ತನ್ನ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಯನ್ನು  ವಿಟ್ಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವಹಿಂದೂ ಪರಿಷತ್ ನ ವಿಟ್ಲ ಪ್ರಖಂಡದ ಅಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ ತಿಳಿಸಿದ್ದಾರೆ.

ಆರೋಪಿ ವಕೀಲ ಉಮ್ಮರ್ ಕೆ

ವಿಟ್ಲ ಸುತ್ತಮುತ್ತಲ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅನೇಕ ಪ್ರಕರಣಗಳು ನಡೆಯುತ್ತಿದ್ದು,  ಕೆಲವೊಂದು ಪ್ರಕರಣಗಳು ಮುಚ್ಚಿಹೋಗಿವೆ. ತನ್ನ ಕಚೇರಿಯಲ್ಲಿ ಕೆಲಸಕ್ಕಿರುವ ಯುವತಿಗೆ ಕಿರುಕುಳ ನೀಡಿರುವ ಬಗ್ಗೆ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಆರೋಪಿಗೆ ಈಗಾಗಲೇ ಜಾಮೀನು ದೊರೆತಿದೆ.

ಈತ ನಡೆಸಿರುವ ಈ ಕೃತ್ಯದಿಂದಾಗಿ ವಿಟ್ಲ ಸುತ್ತಮುತ್ತಲ ಪ್ರದೇಶದಲ್ಲಿ ಕೋಮು ಸಾಮರಸ್ಯ ಕದಡುವ ಸಾಧ್ಯತೆ ಇದ್ದು,  ಇಂತಹ ಪ್ರಕರಣಗಳು ಇನ್ನೂ ಮುಂದಕ್ಕೆ ಮರುಕಳಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!