Saturday, July 25, 2026
spot_imgspot_img
spot_imgspot_img

ವಿಟ್ಲ: ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಹಾಗೂ ಅಭ್ಯರ್ಥಿಗಳ ಸಮಾಲೋಚನೆ

- Advertisement -
- Advertisement -

ವಿಟ್ಲ: ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಹಾಗೂ ಅಭ್ಯರ್ಥಿಗಳ ಸಮಾಲೋಚನೆ ನಡೆಯಿತು.

ಈ ಸಮಾಲೋಚನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ. ಪುತ್ತೂರು ವಿಧಾನ ಸಭಾ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ . ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಶುಭಾಸ್ ಚಂದ್ರ ಶೆಟ್ಟಿ.ಪುತ್ತೂರ್ ವಿಧಾನ ಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ್ ಭಂಡಾರಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಶ್ರೀ ಡಾ ರಾಜಾರಾಂ ಕೆ ವಿ ರವರ ಘನ ಅಧ್ಯಕ್ಷತೆ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕ್ ಪಂಚಾಯತ್ ಸದಸ್ಯರು, ಪಟ್ಟಣ ಪಂಚಾಯಿತಿ ಸದಸ್ಯರು ಮತ್ತು ಅಭ್ಯರ್ಥಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಭ್ಯರ್ಥಿಗಳು ಹಾಗೂ ಮುಂಚೂಣಿ ವಿವಿಧ ಘಟಕದ ಮುಖಂಡರು . ವಿಟ್ಲ-ಉಪ್ಪಿನಂಗಡಿ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರು ವಿ ಅಬ್ದುಲ್ ರಹಿಮಾನ್ ಹಾಗೂ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಹಾಗೂ ಅಭ್ಯರ್ಥಿಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿ ಕೊಡುವ ಭರವಸೆಯನ್ನು ನೀಡಿದರು.

- Advertisement -

Related news

error: Content is protected !!