Friday, March 29, 2024
spot_imgspot_img
spot_imgspot_img

ವಿಟ್ಲ: ಕಾಂಗ್ರೆಸ್ ವತಿಯಿಂದ ಪ್ರತಿಭಟನೆ; ಧಾರ್ಮಿಕ ಕೇಂದ್ರಗಳಿಗೆ ತೊಂದರೆಯಾದರೆ ಒಟ್ಟಾಗಿ ಹೋರಾಟ; ಶಕುಂತಳಾ ಶೆಟ್ಟಿ

- Advertisement -G L Acharya panikkar
- Advertisement -
driving

ವಿಟ್ಲ: ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇದೀಗ ದೇವಸ್ಥಾನಗಳನ್ನು ಧ್ವಂಸ ಮಾಡುತ್ತಿದೆ. ಇದೇನಾ ಬಿಜೆಪಿಯ ಅಚ್ಛೆದಿನ್ ಎಂದು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಪ್ರಶ್ನಿಸಿದರು.
ಅವರು ವಿಟ್ಲ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿಧೋರಣೆಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಧರ್ಮ ಮತ್ತು ದೇವರ ಮೇಲೆ ಅಭಿಮಾನ, ಗೌರವ ಇರಬೇಕು. ಅದನ್ನು ನೀಡಲು ಸಾಧ್ಯವಾಗದಿದ್ದವರು ಅಧಿಕಾರ ಇರಲು ಯೋಗ್ಯತೆ ಇಲ್ಲ.ಧಾರ್ಮಿಕ ಕೇಂದ್ರಗಳಿಗೆ ತೊಂದರೆ ಮಾಡುವುದಾದರೆ ನಾವೆಲ್ಲಾ ಒಂದಾಗಿ ಹೋರಾಟ ಮಾಡಬೇಕುತ್ತದೆ ಎಂದರು.

ನಂದಿಕೂರಿನಿಂದ ಕಾಸರಗೋಡಿಗೆ ಹೋಗಲು ಸಮುದ್ರ ಬದಿಯಲ್ಲಿ ನೇರ ದಾರಿ ಇದ್ದರೂ, ಕೃಷಿಕರಿಗೆ ತೊಂದರೆ ಮಾಡುವ ನಿಟ್ಟಿನಲ್ಲಿ ವಿಟ್ಲ, ವೀರಕಂಬ, ಕೇಪು ಭಾಗದಲ್ಲಿ ವಿದ್ಯುತ್ ಮಾರ್ಗದ ಯೋಜನೆ ರೂಪಿಸಲಾಗಿದೆ. ಜನರಿಗೆ ನೆಮ್ಮದಿ ಮರಳಿ ಬರಲು ಕಾಂಗ್ರೆಸ್ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ ಎಂದು ಹೇಳಿದರು.

ವಿಟ್ಲ ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ. ಬಿ. ಮಾತನಾಡಿ ವಿವಿಧ ಉತ್ಪನ್ನಗಳ ಬೆಲೆ ಏರಿಕೆಗಳು ದೇಶದಲ್ಲಿ ಅಚ್ಛೇದಿನ್ ನಿರ್ಮಾಣ ಮಾಡಿದೆ. ಜಮೀನ್ದಾರೀ ಪದ್ದತಿಯನ್ನು ಮತ್ತೆ ಜಾರಿಗೆ ತರುವ ಕಾರ್ಯಕ್ಕೆ ಬಿಜೆಪಿ ಕೈ ಹಾಕಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ. ಎಸ್. ಮಹಮ್ಮದ್, ಡಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಮಾತನಾಡಿದರು.

ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸೋಮನಾಥ ಉಪ್ಪಿನಂಗಡಿ, ಜಿಲ್ಲಾ ಹಿಂದುಳಿತ ವರ್ಗಗಳ ಸಂಯೋಜಕ ಅಶೋಕ್ ಡಿಸೋಜ, ವಿಟ್ಲ ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಕರೀಂ ಕುದ್ದುಪದವು, ಹಿಂದುಳಿತ ವರ್ಗಗಳ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕಿಸಾನ್ ಘಟಕ ಅಧ್ಯಕ್ಷ ಎಳ್ಯಣ್ಯ ಪೂಜಾರಿ, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ಅಸಂಘಟಿತ ಕಾರ್ಮಿಕರ ಅಧ್ಯಕ್ಷ ಸೇಸಪ್ಪ ನೆಕ್ಕಿಲು, ಕಾರ್ಮಿಕ ಘಟಕ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ, ಉಪ್ಪಿನಂಗಡಿ ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಯುಸಿ ತೌಸಿಫ್, ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ, ಸದಸ್ಯ ಪದ್ಮನಾಭ ಪೂಜಾರಿ ಸಣ್ಣಗುತ್ತು, ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಸದಸ್ಯ ರಾಜೇಂದ್ರನಾಥ ರೈ ಪೆರುವಾಯಿ, ಮಾಜಿ ಅಧ್ಯಕ್ಷ ರಾಲ್ಫ್ ಡಿಸೋಜ, ಸೀತಾರಾಮ ಶೆಟ್ಟಿ ಮುಳಿಯ, ಪಂಚಪಾಲ ಶೆಟ್ಟಿ ಪೆರುವಾಯಿ, ಬಾಲಕೃಷ್ಣ ಬೇಂಗ್ರೋಡಿ, ಶ್ರೀಧರ ಶೆಟ್ಟಿ ಪುಣಚ, ಮಾಣಿಲ ಗ್ರಾಮ ಪಂಚಾಯಿತಿ ಸದಸ್ಯ ಶ್ರೀಧರ ಬಾಳೆಕಲ್ಲು, ಬಲ್ನಾಡು ವಲಯ ಅಧ್ಯಕ್ಷ ಚಂದಪ್ಪ ಪೂಜಾರಿ, ಸಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಗೌಡ, ಅಬ್ದುಲ್ ರಹಿಮಾನ್ ಹಸೈನಾರ್, ಸುನಿತಾ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!