Monday, April 29, 2024
spot_imgspot_img
spot_imgspot_img

ವಿಟ್ಲ: ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ; SDPI ಮುಖಂಡನನ್ನು ವಶಕ್ಕೆ ಪಡೆದ ಪೊಲೀಸರು..!

- Advertisement -G L Acharya panikkar
- Advertisement -

ಬಂಟ್ವಾಳ: ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆಯಲ್ಲಿ ಎಸ್‌ಡಿಪಿಐ ಮುಖಂಡನ ಮನೆ ವೇಳೆ ದಾಳಿ ನಡೆಸಿದ್ದು ಈ ಸಂಬಂಧ ಮಹಮ್ಮದ್ ತಂಸೀರ್‍ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ತಂಸೀರ್‌ನನ್ನು ವಶಕ್ಕೆ ಪಡೆದ ಪೊಲೀಸರು..? ಕಾರಣವೇನು..?
ಇನ್ನು ಕೆಜೆ ಹಳ್ಳಿ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತಂಸೀರ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 2020ರ ಆಗಸ್ಟ್ 11ರಂದು ಗಲಭೆ ನಡೆದಿತ್ತು.

ವಿಟ್ಲ ಠಾಣಾ ವ್ಯಾಪ್ತಿಯ ನಾರ್ಶ ಸಮೀಪದ ಬೋಳಂತೂರು ಗ್ರಾಮದ ಬೀರುಕೋಡಿ ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಂಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸ್ ದಾಳಿ ನಡೆದಿದ್ದು ಅಗತ್ಯ ದಾಖಲೆಗಳ ಸಹಿತ ತಂಸೀರ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ,ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ಎಚ್, ನಗರ ಠಾಣಾ ಪೊಲೀಸ್ ಎಸ್. ಐ.ಅವಿನಾಶ್, ಗ್ರಾಮಾಂತರ ಎಸ್ ಐ ಹರೀಶ್, ವಿಟ್ಲ ಎಸ್.ಐ.ಸಂದೀಪ್ ಸಹಿತ ಇಡೀ ಪೊಲೀಸ್ ತಂಡ ದಾಳಿ ನಡೆಸಿದ್ದು ತಂಸೀರ್‌ ನನ್ನು ವಶಕ್ಕೆ ಪಡೆದು ಬೆಂಗಳೂರಿನ ಪೊಲೀಸರಿಗೆ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸರು ತಯಾರಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

astr
- Advertisement -

Related news

error: Content is protected !!