Friday, June 5, 2026
spot_imgspot_img
spot_imgspot_img

ವಿಟ್ಲ: ಕೆಲಿಂಜ ಕೊಟ್ಟಾರಿಕಟ್ಟೆ ಬಸ್ಸು ನಿಲ್ದಾಣದ ಬಳಿ ದನದ ಕಿವಿ ಕತ್ತರಿಸಿ ಬಿಸಾಕಿದ ದುಷ್ಕರ್ಮಿಗಳು..!!

- Advertisement -
- Advertisement -

ವಿಟ್ಲ: ದುಷ್ಕರ್ಮಿಗಳು ದನದ ಕಿವಿ ಕತ್ತರಿಸಿ ಬಿಸಾಕಿದ ಘಟನೆ ಕೆಲಿಂಜ ಕೊಟ್ಟಾರಿ ಕಟ್ಟೆ ಬಸ್ಸು ನಿಲ್ದಾಣದ ಬಳಿ ಬೆಳಕಿಗೆ ಬಂದಿದೆ.

ವೀರಕಂಭ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್‌ ನಿಲ್ದಾಣದ ಬಳಿ ಇಂದು ಮುಂಜಾನೆ ಕತ್ತರಿಸಿದ ದನದ ಕಿವಿ ಮತ್ತು ಚರ್ಮ ಪತ್ತೆಯಾಗಿದೆ. ಸ್ಥಳೀಯರು ವಿಟ್ಲ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಸೇರಿದ್ದು, ಈ ಕೃತ್ಯದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಡಹಬ್ಬ ದಸರಾ ಮತ್ತು ನವರಾತ್ರಿ ಸಂದರ್ಭದಲ್ಲಿ ದುಷ್ಕರ್ಮಿಗಳು ಕೋಮು ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ಭಜರಂಗದಳ ಕೆಲಿಂಜ ಘಟಕ ಆರೋಪಿಸಿದೆ.

- Advertisement -

Related news

error: Content is protected !!