Monday, April 29, 2024
spot_imgspot_img
spot_imgspot_img

ವಿಟ್ಲ: ಕೇಪು ಗ್ರಾಮ ಪಂಚಾಯತ್ “ಘನತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ಯಾಂಡಿಂಗ್ ಲೋಕಾರ್ಪಣೆ”ಯು ಗುಂಪಲಡ್ಕದಲ್ಲಿ ನಡೆಯಿತು

- Advertisement -G L Acharya panikkar
- Advertisement -

ವಿಟ್ಲ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್, ಕೇಪು ಗ್ರಾಮ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ಸ್ವಜ್ಯೋತ್ಸವ – ನಿತ್ಯೋತ್ಸವ ಮಾಸಾಚರಣೆ ಪ್ರಯುಕ್ತ ಕೇಪು ಗ್ರಾಮದ ಗುಂಪಲಡ್ಕದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ಯಾಂಡಿಂಗ್ ಲೋಕಾರ್ಪಣೆಯು ನೂತನ ಘನತ್ಯಾಜ್ಯ ಘಟಕದ ಆವರಣದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಸಂಜೀವ ಮಠಂದೂರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕೆ, ಬಂದರು. ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಘನತ್ಯಾಜ್ಯ ವಿಲೇವಾರಿ ಘಟಕದ ಉದ್ಘಾಟನೆಯನ್ನು ಮಾಡಿದರು. ಘನ ತ್ಯಾಜ್ಯದ ವಾಹನ ಹಸ್ತಾಂತರವನ್ನು ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇರವೇರಿಸಿದರು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಹಾಗೂ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್ ಎಲ್ ಬೋಜೆ ಗೌಡ, ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.

driving
- Advertisement -

Related news

error: Content is protected !!