Sunday, June 29, 2025
spot_imgspot_img
spot_imgspot_img

ವಿಟ್ಲ: ಕೊಲೆಗೈದ ಸ್ಥಿತಿಯಲ್ಲಿ ಚಂದಳಿಕೆಯ ಚಿರತೆ ದಿನೇಶ್ ನ ಮೃತದೇಹ ಪತ್ತೆ; ತಂದೆಯೇ ಕೊಲೆಗೈದಿರುವ ಶಂಕೆ..!

- Advertisement -
- Advertisement -

ವಿಟ್ಲ: ವ್ಯಕ್ತಿಯೋರ್ವರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ, ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಚಂದಳಿಕೆಯ ಕಾಂತಮೂಲೆ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಾಂತಾಮೂಲೆ ನಿವಾಸಿ ದಿನೇಶ್ ಅಲಿಯಾಸ್ ಚಿರತೆ ದಿನೇಶ್(45) ಎಂದು ಗುರುತಿಸಲಾಗಿದೆ.

ದಿನೇಶ್ ರವರ ಮೃತದೇಹವು ಅವರ ಮನೆಯ ರೂಮ್ ನಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದಿನೇಶ್ ಮತ್ತು ಆತನ ತಂದೆ ವಸಂತ ಗೌಡ ಇಬ್ಬರೇ ಮನೆಯಲ್ಲಿ ವಾಸವಿದ್ದು, ಆತನ ತಂದೆಯೇ ಕೊಲೆಗೈದಿರಬಹುದೆಂಬ ಸಂಶಯ ವ್ಯಕ್ತವಾಗಿದೆ.

ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

vtv vitla
vtv vitla
- Advertisement -

Related news

error: Content is protected !!