- Advertisement -
- Advertisement -


ವಿಟ್ಲ ಸಮೀಪದ ಚಂದಳಿಕೆ ಮಾಡತ್ತಡ್ಕ ನಿವಾಸಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ವಿಟ್ಲ ಜಯಕರ(35) ಎನ್ನಲಾಗಿದೆ.
ಮೇಸ್ತ್ರಿ ಕೆಲಸ ಮಾಡುತ್ತಿದ್ದ ಇವರು ಇಂದು ಮುಂಜಾನೆಯಿಂದ ನಾಪತ್ತೆಯಾಗಿದ್ದರು. ಸಂಜೆ ಅವರ ಮೃತದೇಹ ಮಾಡತ್ತಡ್ಕ ಸಮೀಪಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.



- Advertisement -








