Thursday, April 25, 2024
spot_imgspot_img
spot_imgspot_img

ವಿಟ್ಲ: ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ; ಮೂರನೇ ಆರೋಪಿ ಹರ್ಷಿತ್‌‌ನನ್ನು ಹೆಡೆಮುರಿ ಕಟ್ಟಿ ಜೈಲಿಗಟ್ಟಿದ ವಿಟ್ಲ ಪೊಲೀಸರು

- Advertisement -G L Acharya panikkar
- Advertisement -

ವಿಟ್ಲ: ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೂರನೇ ಆರೋಪಿಯನ್ನು ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ

ವಿಟ್ಲ ಜಾತ್ರೋತ್ಸವ ಸಂದರ್ಭದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಪ್ರಮುಖ ಆರೋಪಿ ಗಣೇಶ್‌ ಕಡಂಬುನನ್ನು ಬಂಧಿಸಿ ಜೈಲಿಗಟ್ಟಿದ್ದರು. ಇನ್ನೋರ್ವ ಪ್ರಮುಖ ಆರೋಪಿ ಮಂಜುನಾಥ್‌ ಕೇರಳ ಭಾಗದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್‌ ಹೆಚ್‌.ಇ ನಾಗರಾಜ್‌ ಇವರ ನೇತೃತ್ವದಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಂದೀಪ್‌ ಕುಮಾರ್ ಶೆಟ್ಟಿ ತಂಡ ರಚನೆ ಮಾಡಿ ತೀವ್ರವಾಗಿ ತನಿಖೆ ಚುರುಕುಗೊಳಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಮೂರನೇ ಆರೋಪಿ ಹರ್ಷಿತ್‌ ಎಂಬವನನ್ನು ಮಂಗಳೂರಿನಲ್ಲಿ ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯು ಈ ಹಿಂದೆ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಈತನ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್‌ ದಾಸ್‌ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದರು. ರಾತ್ರಿ 12.30ಕ್ಕೆ ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ಸಮಯದಲ್ಲಿ ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರು ಬಂದು ಅಂಗಡಿ ಏಕೆ ಬಂದ್‌ ಮಾಡುತ್ತಿಯಾ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರು ನೀಡಲಾಗಿತ್ತು.

ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.‌

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ ದೊಂಬಿ ಗಲಾಭೆ ಎಬ್ಬಿಸಿ, ಸಾರ್ವಜನಿಕರಿಗೆ ಕಿರುಕುಳ ಉಂಟು ಮಾಡಿರುವ ಈ ಪುಂಡರ ವಿರುದ್ಧ ಕೇಸು ದಾಖಲಿಸಿ ಜೈಲುಗಟ್ಟಿದ ವಿಟ್ಲ ಪೊಲೀಸರಿಗೆ ಸಾರ್ವಜನಿಕ ವಲಯದಿಂದ ವ್ಯಾಪಾಕ ಪ್ರಶಂಸೆ ವ್ಯಕ್ತವಾಗಿದೆ.

- Advertisement -

Related news

error: Content is protected !!