Sunday, July 6, 2025
spot_imgspot_img
spot_imgspot_img

ವಿಟ್ಲ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇದರ ಸಹಭಾಗಿತ್ವದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಅಶೋಕ್ ಕುಮಾರ್ ಇವರ ನೇತೃತ್ವದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ವೇದಾವತಿ ಜೆ ಬಳ್ಳಾಲ್ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇದರ ಸಹಭಾಗಿತ್ವದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮವು ನ. 22 ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಲಾಯಿತು.

ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವೇದಾವತಿ ಜೆ. ಬಳ್ಳಾಲ್ ಕಾರ್ಯಕ್ರಮವನ್ನು ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿ ಯಶಸ್ವಿಗೊಳಿಸುವಲ್ಲಿ ಸಹಕರಿಸಿದರು. ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ನಿರೀಕ್ಷಣಾಧಿಕಾರಿ ಕುಸುಮ ಇವರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಗುಲಾಬಿ ಆಂದೋಲನದ ಕಾರ್ಯಕ್ರಮದ ಉದ್ದೇಶದ ಬಗ್ಗೆ ವಿವರಿಸುತ್ತಾ ತಂಬಾಕುವಿನಿಂದಾಗಿ ದುಷ್ಪರಿಣಾಮದ ಬಗ್ಗೆ ವಿವರಿಸಿದರು. ಸ್ಕೌಟ್ಸ್ ಮಕ್ಕಳಿಂದ ಅಂಗಡಿ ಮಾಲೀಕರಿಗೆ ಪ್ರೀತಿಯಿಂದ ಗುಲಾಬಿ ನೀಡಿ ತಂಬಾಕು ಉತ್ಪನ್ನಗಳನ್ನ ಮಾರಾಟ ಮಾಡದಂತೆ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕೌನ್ಸಿಲರ್ ಶ್ರುತಿ ಪುಂಡಲಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣಮೂರ್ತಿ ಉಪಸ್ಥಿತರಿದ್ದರು. ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಸುರಕ್ಷಣಾಧಿಕಾರಿ ಶ್ರೀಮತಿ ಇವರು ಧನ್ಯವಾದ ಸಮರ್ಪಿಸಿದರು.

ಸೈಂಟ್ ರೀಟಾ ಹಾಗೂ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮಕ್ಕಳು, ಗೈಡ್ಸ್ ಕ್ಯಾಪ್ಟನ್ ಹಾಗೂ ಶಾಲಾ ಶಿಕ್ಷಕರು ಗುಲಾಬಿ ಆಂದೋಲನ ಜಾಥಾವನ್ನು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿದರು.

- Advertisement -

Related news

error: Content is protected !!