Monday, June 22, 2026
spot_imgspot_img
spot_imgspot_img

ವಿಟ್ಲ: (ಜ.29) ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ

- Advertisement -
- Advertisement -

ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 29-1-2023 ನೇ ಆದಿತ್ಯವಾರ ಸಂಜೆ ಗಂಟೆ 5 ಗಂಟೆಗೆ ನಡೆಯಲಿದೆ.

ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್‍ಯದರ್ಶಿ ಶರಣ್ ಪಂಪ್‌ವೆಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳೀಕೃಷ್ಣ ಹಂಸತ್ತಡ್ಕ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ದೇಲ್, ವಿಶ್ವಹಿಂದೂ ಪರಿಷದ್ ಅಧ್ಯಕ್ಷ ವಿಟ್ಲ ಪ್ರಖಂಡ ಪದ್ಮನಾಭ ಕಟ್ಟೆ, ವಿಟ್ಲ ಮುಡ್ನೂರು ಗ್ರಾ.ಪಂ.ಅಧ್ಯಕ್ಷ ಜಯಪ್ರಕಾಶ್ ನಾಯಕ್ ನಾಟೆಕಲ್ಲು, ಇಡ್ಕಿದು ಗ್ರಾ.ಪಂ.ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!