Sunday, July 26, 2026
spot_imgspot_img
spot_imgspot_img

ವಿಟ್ಲ: ಟಿಕ್ ಟಾಕ್ ನ ಹಾಸ್ಯ ವಿಡಿಯೋಗಳಲ್ಲಿ ಮಿಂಚಿ ಅಪಾರ ಅಭಿಮಾನಿ ವರ್ಗವನ್ನು ಪಡೆದಿದ್ದ, ಟಿಕ್ ಟಾಕ್ ಕಮಲಜ್ಜಿ ನಿಧನ

- Advertisement -
- Advertisement -

ಬಂಟ್ವಾಳ: ಟಿಕ್ ಟಾಕ್ ನ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿ ವರ್ಗವನ್ನು ಪಡೆದಿದ್ದ, ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಟಿಕ್ ಟಾಕ್ ಕಮಲಜ್ಜಿ ಯಾನೆ ಕಮಲ (85) ರವರು ಬುಧವಾರ ಸಂಜೆ ನಿಧನರಾಗಿದ್ದಾರೆ.

ಕಳೆದ ಒಂದು ವಾರದಿಂದ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಂಜೆ ನಿಧನರಾಗಿದ್ದಾರೆ. ಮೃತರು ಆರು ಗಂಡು, ಮೂವರು ಹೆಣ್ಣು ಮಕ್ಕಳು, ಮೊಮ್ಮಕ್ಕಳು ಸಹಿತ ಅಪಾರ ಬಂಧುಗಳನ್ನು, ಅಭಿಮಾನಿಗಳನ್ನು ಅಗಲಿದ್ದಾರೆ.

ಟಿಕ್ ಟಾಕ್ ಸ್ಟಾರ್ ಧನರಾಜ್ ಜೊತೆ ಕಮಲಜ್ಜಿ 50ಕ್ಕೂ ಅಧಿಕ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದು, ಇವರ ಕುಟುಂಬವೇ ಟಿಕ್ ಟಾಕ್ ಫ್ಯಾಮಿಲಿ ಎಂದು ಹೆಸರು ಪಡೆದಿತ್ತು. ತಮ್ಮ ಇಳಿವಯಸ್ಸಿನಲ್ಲೂ ಇವರು ಟಿಕ್ ಟಾಕ್ ವಿಡಿಯೋಗಳಲ್ಲಿ ತೋರುತ್ತಿದ್ದ ಅಭಿನಯ, ಮಾತಿನ ವೇಗ, ಮನೆಮಂದಿಯ ಜೊತೆ ಬೆರೆಯುತ್ತಿದ್ದ ದೃಶ್ಯಾವಳಿಗಳಿಂದಾಗಿ ತಮ್ಮದೇ ಆದ ಅಭಿಮಾನಿ ವರ್ಗವನ್ನು ಅವರು ಪಡೆದಿದ್ದರು. ಪ್ರಸೂತಿ ತಜ್ಞೆಯಾಗಿದ್ದ ಇವರು ಪರೋಪಕಾರ ಮನಸ್ಸಿನವರಾಗಿದ್ದರು.

vtv vitla
vtv vitla

ಕಮಲಜ್ಜಿಯ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸನತ್ ಕುಮಾರ್ ರೈ, ಅನಂತಾಡಿ ಗ್ರಾಮ ಬಿಜೆಪಿ ಸಮಿತಿ ಸಂತಾಪ ವ್ಯಕ್ತಪಡಿಸಿದೆ.

vtv vitla
vtv vitla
- Advertisement -

Related news

error: Content is protected !!