- Advertisement -
- Advertisement -
ವಿಟ್ಲ: ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ.
ಇಲ್ಲಿನ ಸೂರಿಕುಮೇರ್ ಜಂಕ್ಷನ್ನ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ಬುಲೆಟ್ ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ.
ಮಂಗಳೂರಿಗೆ ಹೋಗುತ್ತಿದ್ದ ಬುಲೆಟ್ ಟ್ಯಾಂಕರ್ ಮಾಣಿ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದು , ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -