Thursday, July 10, 2025
spot_imgspot_img
spot_imgspot_img

ವಿಟ್ಲ: ತಾಲೂಕು ರಚನೆ ಬಗ್ಗೆ ರಚನಾ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

- Advertisement -
- Advertisement -

ವಿಟ್ಲ : ವಿಟ್ಲ ತಾಲೂಕು ರಚನೆಯ ಬಗ್ಗೆ ವಿಟ್ಲ ತಾಲೂಕು ರಚನಾ ಸಮಿತಿಯ ಪದಾಧಿಕಾರಿಗಳು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಕಂದಾಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ತಾಲೂಕಾಗಿ ಘೋಷಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ರಚನಾ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಜೀವ ಭಂಡಾರಿ, ಶ್ರೀಕೃಷ್ಣ ವಿಟ್ಲ, ಪುನೀತ್ ಮಾಡತ್ತಾರ್, ಸಂಘಟನಾ ಕಾರ್ಯದರ್ಶಿಗಳಾದ ವಿಶ್ವನಾಥ ಎಂ ವೀರಕಂಭ, ಉದಯ ಕುಮಾರ್ ಆಲಂಗಾರು, ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಉಪಸ್ಥಿತರಿದ್ದರು.

- Advertisement -

Related news

error: Content is protected !!