Thursday, April 25, 2024
spot_imgspot_img
spot_imgspot_img

ವಿಟ್ಲ: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ.! ಪ್ರತಿಭಟನೆಗೆ ಸಿದ್ಧವಾದ ವಿಶ್ವ ಹಿಂದೂ ಪರಿಷದ್ ಬಜರಂಗದಳ

- Advertisement -G L Acharya panikkar
- Advertisement -
vtv vitla

ವಿಟ್ಲ: ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ. ವರ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದ್ದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ವಿಟ್ಲ: ಮುಸ್ಲಿಂ ಸಮುದಾಯದ ಮದುವೆ ಸಂಭ್ರಮದಲ್ಲಿ ಕೊರಗಜ್ಜನ ವೇಷ ಧರಿಸಿ ಡಾನ್ಸ್ ಮಾಡಿದ ವರ.?

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂತಹ ಕೃತ್ಯವನ್ನೆಸಗಿ ಹಿಂದೂಗಳ ನಂಬಿಕೆಯನ್ನು ಟೀಕಿಸಿದ್ದಾರೆ, ಅಷ್ಟೇ ಅಲ್ಲದೇ ಕೊರಗ ಸಮುದಾಯವನ್ನುಅವಮಾನಿಸಿದ್ದಾರೆ. ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಪ್ರತಿಭಟನೆ ನಡೆಸುವುದಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

suvarna gold

- Advertisement -

Related news

error: Content is protected !!