Thursday, July 23, 2026
spot_imgspot_img
spot_imgspot_img

ವಿಟ್ಲ: ದ.ಕ.ಜಿ.ಹಿ.ಪ್ರಾ. ಶಾಲೆ ಒಕ್ಕೆತ್ತೂರಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಮೊಹಮ್ಮದ್ ಹಾರಿಸ್ ಸಿ.ಎಚ್ ವಹಿಸಿದ್ದರು. ಅತಿಥಿಗಳಾಗಿ ಒಕ್ಕೆತ್ತೂರು ಶಾಲಾ ಮುಖ್ಯ ಶಿಕ್ಷಕಿ ಗೀತಾ, ಹಿರಿಯ ಶಿಕ್ಷಕಿ ಮೇರಿ, ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಂಚಾಲಕರು, ವಿ.ಟಿವಿ ಮಾಧ್ಯಮ ಸಂಸ್ಥೆಯ ನಿರ್ದೇಶಕರಾದ ರಾಮ್ ದಾಸ್ ಶೆಟ್ಟಿ ವಿಟ್ಲ, ಜಯಕರ್ನಾಟಕ ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಜಗನ್ನಾಥ್‌ ಶೆಟ್ಟಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷರಾದ ದೀಪಕ್ ಅಮೀನ್, ಜಯಕರ್ನಾಟಕ ಜನಪರ ವೇದಿಕೆ ಯ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರಜ್ವತ್ ರೈ, ಪುರಂದರ ರೈ, ರಜತ್ ಆಳ್ವ, ಹಾಗೂ ವಿ ಟಿವಿ ಸಿಬ್ಬಂದಿಗಳು, ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

- Advertisement -

Related news

error: Content is protected !!