Sunday, June 7, 2026
spot_imgspot_img
spot_imgspot_img

ವಿಟ್ಲ: ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ; ಗೃಹ ರಕ್ಷಕ ದಳದ ಸಿಬ್ಬಂದಿ ಅಳಿಕೆಯ ಪ್ರಕಾಶ್ ಮೃತ್ಯು

- Advertisement -
- Advertisement -

ವಿಟ್ಲ: ಗೃಹರಕ್ಷಕ ದಳದ ಸಿಬ್ಬಂದಿಯೋರ್ವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲಿ ಗಲ್ಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಗೋಳ್ತಮಜಲು ಬಳಿಯ ಹಜಾಜ್ ಫ್ಯಾಕ್ಟರಿ ಬಳಿ ನಡೆದಿದೆ.

ಮೃತರನ್ನು ಅಳಿಕೆಯ ಪ್ರಕಾಶ್(36) ಎನ್ನಲಾಗಿದೆ.

ಪ್ರಕಾಶ್ ರವರು ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ವೇಳೆ ದಾರಿ ಮಧ್ಯೆ ಗೋಳ್ತಮಜಲು ಎಂಬಲ್ಲಿ ಆಕ್ಟಿವಾ ಮೈಲಿಗಲ್ಲಿಗೆ ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತರ ಪತ್ನಿ ಸೌಮ್ಯರವರು ವಿಟ್ಲ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಅರೋಗ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೃತರು ಪತ್ನಿ ಸೌಮ್ಯ, ಮಕ್ಕಳಾದ ಪ್ರಣಮ್ಯ, ಪ್ರಣವ್ ಮತ್ತು ಬಂಧು-ಮಿತ್ರರನ್ನು ಅಗಲಿದ್ದಾರೆ.

vtv vitla
vtv vitla
- Advertisement -

Related news

error: Content is protected !!