Saturday, August 8, 2026
spot_imgspot_img
spot_imgspot_img

ವಿಟ್ಲ: ನೇಣು ಬಿಗಿದು SSLC ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಖಂಡನೆ

- Advertisement -
- Advertisement -

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಈ ಘಟನೆಗೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಅತ್ಮಿಕಾ(14) ನೇಣಿಗೆ ಶರಣಾದ ವಿದ್ಯಾರ್ಥಿನಿ. ವಿದ್ಯಾರ್ಥಿಗೆ ಮುಸ್ಲಿಂ ಯುವಕ ಪ್ರೀತಿಯ ನಾಟಕವಾಡಿ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕನ್ಯಾನ ಗ್ರಾಮದ ತಲೆಕ್ಕಿಯ ಸಾಹುಲ್ ಹಮೀದ್ ಎಂಬಾತ ವಿದ್ಯಾರ್ಥಿನಿಯ ಜೊತೆಗೆ ಪ್ರೇಮದ ನಾಟಕವಾಡಿ ಮಾನಸಿಕ ಹಿಂಸೆ ನೀಡಿದ್ದಾನೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂಬುವುದು ಮೆಲ್ನೋಟಕ್ಕೆ ತಿಳಿದು ಬಂದಿದೆ.ಈ ಪ್ರಕರಣವನ್ನು ಹಿಂ.ಜಾ.ವೇ.ವಿಟ್ಲ ತಾಲೂಕು ತೀವ್ರವಾಗಿ ಖಂಡಿಸುತ್ತದೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮುಂದೆ ಇಂತಹ ಅನಾಹುತ ನಡೆಯದಂತೆ ಜಿಲ್ಲಾಡಳಿತ ಎಚ್ಚರಿಕೆ ವಹಿಸ ಬೇಕೆಂದು ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಅಗ್ರಹಿಸುತ್ತದೆ.

- Advertisement -

Related news

error: Content is protected !!