Wednesday, May 8, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ಮುಕ್ತಾಯ; 18 ವಾರ್ಡ್ ಗಳಲ್ಲಿ ಶೇ.73.56 ಮತದಾನ

- Advertisement -G L Acharya panikkar
- Advertisement -
suvarna gold

ವಿಟ್ಲ: ಪಟ್ಟಣ ಪಂಚಾಯತ್ ನ 18 ವಾರ್ಡುಗಳಿಗೆ ಚುನಾವಣೆ ಇಂದು ನಡೆದಿದ್ದು, ಒಟ್ಟು ಶೇ. 73.56 ಮತದಾನವಾಗಿದೆ.

ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಒಕ್ಕೆತ್ತೂರು ಸರ್ಕಾರಿ ಶಾಲೆ, ವಿಠಲ ಪದವಿ ಪೂರ್ವ ಕಾಲೇಜು, ಮೇಗಿನ ಪೇಟೆ, ಬೊಳಂತಿಮೊಗರು, ಸೈಂಟ್ ರೀಟಾ ಶಾಲೆಗಳಲ್ಲಿ ಮತಗಟ್ಟೆ ಮತಗಟ್ಟೆ ಸ್ಥಾಪಿಸಲಾಗಿತ್ತು.

ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ಪ್ರಾರಂಭಗೊಂಡಿತ್ತು. ಇಬ್ಬನಿ ಸಮಸ್ಯೆ ಬಹುತೇಕ ಮಂದಿ 9 ಗಂಟೆ ನಂತರವೇ ಮತದಾನ ಕೇಂದ್ರಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ 10 ಗಂಟೆ ವೇಳೆಗೆ ಶೇ.20ರಷ್ಟು ಮತದಾನವಾಗಿತ್ತು. ಮಧ್ಯಾಹ್ನ ಹೊತ್ತಿಗೆ ಮತದಾರರ ಸಂಖ್ಯೆ ಹೆಚ್ಚಳವಾಗಿದ್ದು, ಕೆಲವು ಕಡೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುವ ದೃಶ್ಯ ಕಂಡು ಬಂದಿದೆ. ಮಧ್ಯಾಹ್ನ 1 ಗಂಟೆ ವೇಳೆ ಶೇ. 52 ಮತದಾನವಾಗಿತ್ತು. ಸಂಜೆ 5 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿದಿದ್ದು, ಶೇ. 73.56 ರಷ್ಟು ಮತದಾನವಾಗಿದೆ.

vtv vitla
vtv vitla

ವಿಟ್ಲ ಸರ್ಕಾರಿ ಮಾದರಿ ಶಾಲೆಯಲ್ಲಿರುವ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ ಹೊರತು ಉಳಿದೆಡೆ ಶಾಂತಿಯುತವಾಗಿ ಮತದಾನ ನಡೆದಿದೆ.

ಚುನಾವಣೆಗೆ ವಿದ್ಯುತ್ ಚಾಲಿತ ಮತಯಂತ್ರಗಳನ್ನು ಬಳಸಿಕೊಳ್ಳಲಾಗಿದ್ದು, ಅಗತ್ಯ ವ್ಯವಸ್ಥೆಗಳನ್ನು ೧೮ ವಾರ್ಡ್ ನ ಮತಗಟ್ಟೆಯಲ್ಲಿ ಮಾಡಲಾಗಿದೆ. ಪ್ರತಿ ಮತಗಟ್ಟೆಗೆ ೪ ಅಧಿಕಾರಿಗಳು, ಓರ್ವ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಎಎಸ್ಪಿ ಶಿವಾಂಶ್ ರಜಪೂತ್ ಅವರು ಭೇಟಿ ಪರಿಶೀಲಿಸಿದರು.

ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜ್ ಎಚ್ ಇ ನೇತೃತ್ವದಲ್ಲಿ ಎಸೈಗಳಾದ ಸಂದೀಪ್ ಕುಮಾರ್ ಶೆಟ್ಟಿ, ಸಂಜೀವ ಮತ್ತು ಸಿಬ್ಬಂದಿ ಬಿಗೀ ಬಂದೋ ಬಸ್ತ್ ಏರ್ಪಡಿಸಿದ್ದರು.

೪೨ ಮಂದಿ ಅಭ್ಯರ್ಥಿಗಳು ಕಣದಲ್ಲಿರುವ ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಎಸ್.ಡಿ.ಪಿ.ಐ. ಕೆಲ ವಾರ್ಡ್ ಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದಿದೆ. ಇಬ್ಬರು ಪಕ್ಷೇತರರೂ ಕಣದಲ್ಲಿದ್ದಾರೆ. 7180 ಮಂದಿ ಪುರುಷ ಮತದಾರರು, 7573 ಮಂದಿ ಮಹಿಳಾ ಮತದಾರರು ಸೇರಿದಂತೆ 14,753 ಮಂದಿ ಮತದಾರರಿದ್ದು, 18 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ಸಂಬಂಧಿಸಿದಂತೆ ಪಿಆರ್‌ಒ, ಎಪಿಆರ್‌ಒ ಹಾಗೂ ಪಿಒ ಸಹಿತ ಒಟ್ಟು 88 ಮಂದಿ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!