Monday, May 6, 2024
spot_imgspot_img
spot_imgspot_img

ವಿಟ್ಲ ಪರಿಸರ ಸೇರಿದಂತೆ ಹಲವೆಡೆ ಕಳ್ಳತನ; ಅಂತರ್‌ ರಾಜ್ಯ ಚೋರನ ಹೆಡೆಮುರಿ ಕಟ್ಟಿದ ಪುತ್ತೂರು ಗ್ರಾಮಾಂತರ ಪೊಲೀಸರು..!

- Advertisement -G L Acharya panikkar
- Advertisement -

ಹಲವು ಸರಣಿ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬೀಳದೇ ಇದ್ದ ಆಸಾಮಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದಿದ್ದು ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.

ಸದ್ರಿ ಕಳ್ಳತನ ಪ್ರಕರಣವನ್ನು ಭೇಧಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ. ಎಂ.ವೈ ಮತ್ತು ರಾಮಕೃಷ್ಣರವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಣ್ಣೂರು ಜಿಲ್ಲೆಯ ಕೊಲ್ಲಂ ಪರಂಬಿಲ್ ನಿವಾಸಿ ಮಹಮ್ಮದ್.ಕೆ.ಯು (42 ವ) ಎನ್ನಲಾಗಿದೆ.

ದಸ್ತಗಿರಿ ಮಾಡಿ ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಸರಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು 2,50,000 /- ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಲ್ಲದೇ ಈತನು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ, ಪರಸರಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ.

ಈ ಪ್ರಕರಣವನ್ನು ಭೇದಿಸುವಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ, ಮಾನ್ಯ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರ್ ಚಂದ್ರ, ಪುತ್ತೂರು ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರಾದ ಡಾ.ವೀರಯ್ಯ ಹಿರೇಮಠ, ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್, ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್‌ ವೃತ್ತ ನಿರೀಕ್ಷಕರ ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ.ಎಂ.ವೈ ಮತ್ತು ರಾಮಕೃಷ್ಣ, ಸಿಬ್ಬಂದಿಗಳಾದ ಪ್ರೊ.ಪಿಎಸ್‌ಐ ಗಳಾದ ಕಾರ್ತಿಕ್ ಮತ್ತು ಭವಾನಿ, ಎಎಸ್‌ಐ ಮುರುಗೇಶ್, ಹೆಚ್ ಸಿಗಳಾದ ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್.ರ, ಪ್ರಶಾಂತ್, ಸ್ಕರಿಯ ಪ್ರಶಾಂತ್ .ರೈ, ಪಿ ಸಿ ಹರ್ಷಿತ್ ರವರು ಸಹಕರಿಸಿರುತ್ತಾರೆ.

vtv vitla
- Advertisement -

Related news

error: Content is protected !!