Saturday, April 27, 2024
spot_imgspot_img
spot_imgspot_img

ವಿಟ್ಲ ಪೊಲೀಸರ ಮಿಂಚಿನ ಕಾರ್ಯಾಚರಣೆ; ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ಓರ್ವ ವಶಕ್ಕೆ

- Advertisement -G L Acharya panikkar
- Advertisement -

ವಿಟ್ಲ: ಅಕ್ರಮ ಗೋ ಸಾಗಾಟದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಪಿಕಪ್ ಸಹಿತ ಓರ್ವನನ್ನು ವಶಕ್ಕೆ ಪಡೆದ ಘಟನೆ ಮಾಣಿಯಲ್ಲಿ ನಡೆದಿದೆ.

ವಶಕ್ಕೆ ಪಡೆದ ಆರೋಪಿಯನ್ನು ಇರಾಮೂಲೆ ನಿವಾಸಿ ಮಹಮ್ಮದ್ ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಪಿಕಪ್ ವಾಹನ ಹಾಗೂ ದನಗಳನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೋರ್ವನಿಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ವಿಟ್ಲ ಎಸ್. ಐ ಸಂದೀಪ್ ನೇತೃತ್ವದ ಕಾರ್ಯಾಚರಣೆಯಲ್ಲಿ ಹೇಮರಾಜ್, ಜಯಕುಮಾರ್ ಹಾಗೂ ಅಶೋಕ್ ಸಹಕಾರ ನೀಡಿದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!