Saturday, June 6, 2026
spot_imgspot_img
spot_imgspot_img

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಚಾಕಲೇಟು ಬೇಕಾ..? ಎಂದು ಕೇಳಿದ್ದಕ್ಕೆ ಮುಸ್ಲಿಂ ಯುವಕನಿಗೆ ಹಲ್ಲೆ ಆರೋಪ..!!

- Advertisement -
- Advertisement -

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ಮುಸ್ಲಿಂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್‌ ಶಾಕೀರ್‌ ಎಂಬಾತ ನೀಡಿದ ದೂರಿನಂತೆ ಕೆಲಿಂಜ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌, ಗುರುವಾರ ಕಾಲೇಜು ಮುಗಿಸಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೆ ಎಂದು ಕೇಳಿದ್ದಾನೆ, ಇದನ್ನು ಪ್ರಶ್ನಿಸಿ ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿಗೆ ಬಸ್ ತಲುಪಿದಾಗ ಬಸ್ಸಿಗೆ ಏಕಾಏಕಿಯಾಗಿ ಆರೋಪಿಗಳು ಹಾಗೂ ಇತರ 3 ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಶಾಕೀರ್ ಪೊಲೀಸರಿಗೆ ದೂರು ನೀಡಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!