Friday, April 19, 2024
spot_imgspot_img
spot_imgspot_img

ವಿಟ್ಲ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

- Advertisement -G L Acharya panikkar
- Advertisement -

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯು ಇಂದು ಧರ್ಮ ಸೇವಾ ವಿಶ್ವಸ್ಥ ಮಂಡಳಿ ಸಭಾ ಭವನ ಧರ್ಮನಗರ ಕಂಬಳಬೆಟ್ಟು ಇಲ್ಲಿ ನಡೆಯಿತು.

ಕಾರ್ಯಕ್ರಮ ಬಿಜೆಪಿ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಭಾರಿ ರಾಮ್‌ದಾಸ್ ಬಂಟ್ವಾಳ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜಾ ರಾಧಕೃಷ್ಣ ಆಳ್ವ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಉಪಸ್ಥಿತಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಆರ್ಯಭಟ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಮಂಗಳೂರು ಇವರನ್ನು ಸನ್ಮಾನಿಸಲಾಯಿತು.

ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಈ ಸಭೆಯಲ್ಲಿ ವಿಟ್ಲ ಮಹಾಶಕ್ತಿ ಕೇಂದ್ರ, ಪುಣಚ ಮಹಾಶಕ್ತಿ ಕೇಂದ್ರ, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರ, ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರ, ಪಾಣಾಜೆ ಮಹಾಶಕ್ತಿ ಕೇಂದ್ರದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾಧವ್ ಸ್ವಾಗತಿಸಿದರು. ಪುಣಚ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ದಯಾನಂದ ಉಜಿರೆಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement -

Related news

error: Content is protected !!