Thursday, May 2, 2024
spot_imgspot_img
spot_imgspot_img

ವಿಟ್ಲ: ಬೈಕ್‌ಗಳ ನಡುವೆ ಅಪಘಾತ; ಓರ್ವನಿಗೆ ಗಾಯ

- Advertisement -G L Acharya panikkar
- Advertisement -

ವಿಟ್ಲ: ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಅಪಘಾತದಿಂದ ಓರ್ವ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಿನ್ನೆ ರಾತ್ರಿ ನಡೆದಿದೆ.

ವಿಟ್ಲ ಕಡೆಯಿಂದ ಕುದ್ದುಪದವು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಇನ್ನೊಂದು ಬೈಕ್ ನ ನಡುವೆ ಈ ಅಪಘಾತ ಸಂಭವಿಸಿದೆ. ಒಂದು ಬೈಕಿನಲ್ಲಿ ಕುದ್ದುಪದವು ಮೂಲದ ವೈದ್ಯರು ಪ್ರಯಾಣಿಸುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ಬೈಕಿನಲ್ಲಿದ್ದವರು ಬಳ್ಳೂರು ನಿವಾಸಿಗಳೆಂದು ತಿಳಿದು ಬಂದಿದೆ.

ಇಬ್ಬರ ಪೈಕಿ ಸಹಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

- Advertisement -

Related news

error: Content is protected !!