Monday, June 30, 2025
spot_imgspot_img
spot_imgspot_img

ವಿಟ್ಲ: ಬೈಕ್ – ಕಾರು ಅಪಘಾತ; ಚಿಕಿತ್ಸೆ ಫಲಿಸದೆ ಯುವಕ ಸಾವು

- Advertisement -
- Advertisement -

ವಿಟ್ಲ: ಬೈಕ್ ಹಾಗೂ ಮಾರುತಿ ಈಕೋ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಮೃತಪಟ್ಟ ಘಟನೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಉತ್ತರ ಕರ್ನಾಟಕ ಮೂಲದ ಸುನಿಲ್ ಮೃತಪಟ್ಟ ಬೈಕ್ ಸವಾರ.

ಸುನಿಲ್ ಬರಿಮಾರು ಎಂಬಲ್ಲಿನ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ ಸುನಿಲ್ ಬೈಕಿನಲ್ಲಿ ಸೂರಿಕುಮೇರಿನಿಂದ ಬರಿಮಾರ್ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈಕೋ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಗಂಭೀರ ಗಾಯಗೊಂಡ ಸುನಿಲ್ ರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

- Advertisement -

Related news

error: Content is protected !!