Friday, May 3, 2024
spot_imgspot_img
spot_imgspot_img

ವಿಟ್ಲ: ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ನೇತ್ರಾ ತಪಾಸಣಾ ಶಿಬಿರ

- Advertisement -G L Acharya panikkar
- Advertisement -

ವಿಟ್ಲ: ಭಾರತೀಯ ಮಜ್ದೂರ್ ಸಂಘ (ಬಿ.ಎಂ.ಎಸ್.) ಇದರ ಸಂಸ್ಥಾಪನಾ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ ಅಂಗವಾಗಿ ಎರಡನೇ ಹಂತದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ನೇತ್ರಾ ತಪಾಸಣಾ ಶಿಬಿರ ವಿಟ್ಲದ ಅಕ್ಷಯ ಸಮುದಾಯ ಭವನದಲ್ಲಿ ತಾಲೂಕು ಘಟಕ ಹಾಗೂ ಎಜೆ ಆಸ್ಪತ್ರೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮವನ್ನು ವಿಟ್ಲದ ಸಿವಿಲ್ ಇಂಜಿನಿಯರ್ , ಲಯನ್ಸ್ ಕ್ಲಬ್ ನ ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ಇವರು ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಕಾರ್ಮಿಕ ಸುಂದರ ಪೂಜಾರಿ ಜೋಗಿಮಠ, ವಿಟ್ಲ ಗ್ರಾಮೀಣ ಬ್ಯಾಂಕ್ ನಿರ್ದೇಶಕ ಉದಯ ಕುಮಾರ್ ಆಲಂಗಾರು, ಸ್ಥಳೀಯ ಪಟ್ಟಣ ಪಂಚಾಯತ್ ಸದಸ್ಯ ಹರೀಶ್ ಸಿಎಚ್, ಎಜೆ ಆಸ್ಪತ್ರೆಯ ವೈದ್ಯರಾದ ಡಾ‌‌.ಬಿಲ್ಮಾ ಶೆಟ್ಟಿ, ಡಾ. ಗೌರವ್ ಉಪಸ್ಥಿತರಿದ್ದರು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಪರಿಕಲ್ಪನೆಯ ಆರೋಗ್ಯ ಸುರಕ್ಷಾ ವಾಹನದ ಸಿಬ್ಬಂದಿ ವರ್ಗದವರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಿಎಂಎಸ್ ತಾಲೂಕು ಅಧ್ಯಕ್ಷ ರಾಜೇಶ್ ಬೊಬ್ಬೆಕೇರಿ ಪ್ರಸ್ತಾವಿಸಿ ಸ್ವಾಗತಿಸಿದರು. ವೀರಕಂಭ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಸಾದ್ ಕಲ್ಮಲೆ ವಂದಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಸಂದೇಶ್ ಕೆಲಿಂಜ, ಕಾರ್ಯಾಲಯ ಕಾರ್ಯದರ್ಶಿ ಪ್ರೀತಮ್ ದೇವಸ್ಯ, ನಾಗೇಶ್ ಸುವರ್ಣ ಜೋಗಿಮಠ, ಸಂತೋಷ್ ಕಲ್ಮಲೆ, ಪುಷ್ಪರಾಜ್ ಕೆಲಿಂಜ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನೂರಾರು ಕಾರ್ಮಿಕರು ಶಿಬಿರದ ಪ್ರಯೋಜನ ಪಡೆದುಕೊಂಡರು.

- Advertisement -

Related news

error: Content is protected !!