Friday, June 5, 2026
spot_imgspot_img
spot_imgspot_img

ವಿಟ್ಲ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

- Advertisement -
- Advertisement -

ವಿಟ್ಲ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಕೋಡಪದವು ನಿವಾಸಿ ಸುಲೈಮಾನ್ ಎಂಬವರ ಪ್ರಥಮ ಪುತ್ರ, ಅಮ್ಟೂರ್ ಶರೀಫ್ (32) ಮೃತ ಯುವಕ. ಶರೀಫ್ ಅವರು ಮರದ ಕೆಲಸ ಮಾಡುತ್ತಿದ್ದು, ನಿನ್ನೆ ಬೆಳಗ್ಗೆ ಮರ ಕಡಿಯುತ್ತಿದ್ದಾಗ ಮರದಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಯೂನಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಶರೀಫ್ ಅವರು ತಂದೆ, ತಾಯಿ, ಸಹೋದರರು, ಪತ್ನಿ ಹಾಗೂ 8 ತಿಂಗಳ ಮಗು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

astr
- Advertisement -

Related news

error: Content is protected !!