Friday, April 26, 2024
spot_imgspot_img
spot_imgspot_img

ವಿಟ್ಲ: ಬಿಜೆಪಿ ಮಹಾಶಕ್ತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

- Advertisement -G L Acharya panikkar
- Advertisement -

ವಿಟ್ಲ: ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು. ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಪ್ರತಿವರ್ಷ ಯೊಗ ದಿನಾಚರಣೆಯು ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ. ಆ ಪ್ರಯುಕ್ತ ವಿಟ್ಲ ಮಹಾಶಕ್ತಿ ಕೇಂದ್ರದ ಭಾರತ್ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ರಾಮದಾಸ್, ಜಗದೀಶ್ ಪಾನ್ನೆ ಮಜಲು, ಹರೀಶ ಸಿಎಚ್, ವೀರಪ್ಪ ಗೌಡ, ಲೋಕನಾಥ ಶೆಟ್ಟಿ ಕೊಲ್ಯ, ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದು, ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಇದು ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ. ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದು.

ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ; ಯೋಗ ಮಾರ್ಗದಲ್ಲಿ ಬದುಕೋಣ; ಮೋದಿ

- Advertisement -

Related news

error: Content is protected !!